| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 30 JUNE 2024
SHIMOGA : ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಶಾಸಕ ಸ್ಥಾನಕ್ಕೆ ರಾಜೀನಾಮೆಯ (Resignation) ಸವಾಲು ಹಾಕಿದ್ದಾರೆ.
ಸಭೆಯಲ್ಲಿ ಶಾಸಕ ಚನ್ನಬಸಪ್ಪ, ಗೋ ಹತ್ಯೆ ನಿಷೇಧ ಕಾನೂನು ಸರಿಯಾಗಿ ಪಾಲನೆ ಆಗದಿರುವ ಬಗ್ಗೆ ವಿಷಯ ಪ್ರಸ್ತಾಪಿಸಿದರು. ಬಕ್ರೀದ್ ಹಬ್ಬದ ಸಂದರ್ಭ ಸಾವಿರಾರು ಗೋವುಗಳ ಹತ್ಯೆ ಮಾಡಲಾಯಿತು ಎಂದು ಆರೋಪಿಸಿದರು.
ಶಾಸಕ ಸ್ಥಾನಕ್ಕೆ ರಾಜೀನಾಮೆಯ ಸವಾಲು
ಹತ್ಯೆಯ ಬಹಳಷ್ಟು ವಿಡಿಯೊಗಳು ನನ್ನ ಮೊಬೈಲ್‌ನಲ್ಲಿವೆ. ಕಾನೂನಿಗೆ ಬೆಲೆ ಇಲ್ಲವಾ ಎಂದು ಪ್ರಶ್ನಿಸಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕಿ ಬಲ್ಕಿಶ್ ಬಾನು ಅವರು ಜಿಲ್ಲೆಯಲ್ಲಿ ಗೋ ಹತ್ಯೆ ನಡೆಯುತ್ತಿಲ್ಲ. ತಪ್ಪು ಮಾಹಿತಿ ನೀಡಬೇಡಿ ಎಂದರು. ಇದಕ್ಕೆ ಸಿಟ್ಟಿಗೆದ್ದ ಚನ್ನಬಸಪ್ಪ, ಕೈಯಲ್ಲಿದ್ದ ಮೊಬೈಲನ್ನು ಕೆಳಕ್ಕೆ ಬೀಳಿಸಿ ಶಿವಮೊಗ್ಗದಲ್ಲಿ ಗೋ ಹತ್ಯೆ ನಡೆಯುತ್ತಿಲ್ಲ ಎಂಬುದು ನಿಜವಾದಲ್ಲಿ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಸವಾಲು ಹಾಕಿದರು.
![]()
ನಾಲ್ಕು ವರ್ಷದಲ್ಲಿ 155 ಕೇಸ್
ಮಧ್ಯ ಪ್ರವೇಶಿಸಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಗೋ ಹತ್ಯೆ, ಅಕ್ರಮ ಸಾಗಣೆ ಸೇರಿದಂತೆ ನಾಲ್ಕು ವರ್ಷದಲ್ಲಿ 155 ಪ್ರಕರಣಗಳನ್ನು ದಾಖಲಿಸಲಾಗಿದೆ. ಸಾರ್ವಜನಿಕರಿಂದ 100ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಸಭೆ ಗಮನಕ್ಕೆ ತಂದರು.
ಸಚಿವ ಮಧು ಬಂಗಾರಪ್ಪ, ಗೋವುಗಳ ಅಕ್ರಮ ಸಾಗಣೆ, ಹತ್ಯೆ ವಿಷಯದಲ್ಲಿ ಕಾನೂನು ಪಾಲನೆಗೆ ನಮ್ಮಿಂದ ಯಾವುದೇ ಅಡ್ಡಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ – ಆಗುಂಬೆ ಬಳಿ ಪೊಲೀಸರಿಗೆ ಸಿಕ್ಕಿಬಿದ್ದ ಉಡುಪಿಯ ಕಾರು ಚಾಲಕನಿಗೆ 15 ಸಾವಿರ ರೂ. ದಂಡ, ಕಾರಣವೇನು?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()