ಶಿವಮೊಗ್ಗ: ಸಿಟಿಯಲ್ಲಿ ಇಡೀ ದಿನ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್. (ಈ ಸುದ್ದಿಯನ್ನು ಇನ್ನು 163 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ಮೆರವಣಿಗೆ
ಗಾಂಧಿ ಬಜಾರ್: ರಾಮಣ್ಣ ಶ್ರೇಷ್ಠಿ ಪಾರ್ಕ್ನಲ್ಲಿ ಪ್ರತಿಷ್ಠಾಪಿಸಾಗಿದ್ದ ಗಣಪತಿ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಗಾಂಧಿ ಬಜಾರ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು.

ಜಾತಿ ಗಣತಿಯಿಂದಲೇ ಸರ್ಕಾರ ಪತನ
ಪತ್ರಿಕಾ ಭವನ: ಜಾತಿ ಗಣತಿ ಒಂದರಿಂದಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಈ ಹಿಂದೆ ₹150 ಕೋಟಿ ವೆಚ್ಚದಲ್ಲಿ ಸಿದ್ದಪಡಿಸಿದ ಜಾತಿ ಗಣತಿಯನ್ನು ಯಥಾವತ್ತು ಜಾರಿ ಮಾಡುತ್ತೇನೆ ಎನ್ನುತ್ತಿದ್ದ ಸಿದ್ದರಾಮಯ್ಯ, ಈಗ ಅದನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ. ₹420 ಕೋಟಿ ವೆಚ್ಚದಲ್ಲಿ ಮತ್ತೊಮ್ಮೆ ಜಾತಿ ಗಣತಿ ಮಾಡಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ತಪಾಸಣೆ
ಬಿಜೆಪಿ ಕಚೇರಿ: ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನದ ಅಂಗವಾಗಿ ದೇಶಾದ್ಯಂತ ಸ್ವಸ್ತ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಈ ಅಭಿಯಾನದ ಭಾಗವಾಗಿ ಶಿವಮೊಗ್ಗ ಜಿಲ್ಲೆಯ ಏಳು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಪಿಎಲ್ ಪಡಿತರ ಚೀಟಿಗಳ ಮಾನದಂಡ ಬದಲಿಸಿ
ಪತ್ರಿಕಾ ಭವನ: ಬಿಪಿಎಲ್ ಪಡಿತರ ಚೀಟಿಗಳ ಮಾನದಂಡವನ್ನು ರಾಜ್ಯ ಸರ್ಕಾರ ಕೂಡಲೆ ಬದಲಿಸಬೇಕು. ಆದಾಯ ಮಿತಿಯನ್ನು ಕನಿಷ್ಠ ₹5 ಲಕ್ಷಕ್ಕೆ ಹೆಚ್ಚಿಸಬೇಕು. ಇಲ್ಲವಾದಲ್ಲಿ ಲಕ್ಷಾಂತರ ಕುಟುಂಬಗಳು ಸೌಲಭ್ಯ ವಂಚಿತವಾಗಲಿವೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ನ ಮುಖ್ಯಸ್ಥ ಕಲ್ಲೂರು ಮೇಘರಾಜ್ ಆಗ್ರಹಿಸಿದ್ದಾರೆ.
![]()

ಮಾನವ ಸರಪಳಿ ನಿರ್ಮಿಸಿ ಹೋರಾಟ
ಜಿಲ್ಲಾಧಿಕಾರಿ ಕಚೇರಿ: ಒಳಮೀಸಲಾತಿ ವರ್ಗೀಕರಣ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಬಂಜಾರ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಧರಣಿ ನಿರತರು ಶಿವಮೊಗ್ಗದ ಮಹಾವೀರ ಸರ್ಕಲ್ನಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ಜಿಲ್ಲೆಯ ವಿವಿಧ ತಾಂಡಾಗಳಿಂದ ಜನರು ಆಗಮಿಸಿ ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದಾರೆ.

ಈದ್ ಮೆರವಣಿಗೆ, ಎಫ್ಐಆರ್ಗೆ ಪಟ್ಟು
ಜಿಲ್ಲಾಧಿಕಾರಿ ಕಚೇರಿ: ಈದ್ ಮಿಲಾದ್ ಮೆರವಣಿಗೆ ಸಂದರ್ಭ ನೂರಾರು ಡಿಜೆ ಬಳಕೆ ಮಾಡಿದ್ದಕ್ಕೆ ಬಜರಂಗದಳ, ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಡಿಜೆ ಬಳಕೆ ಮಾಡಿದವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇವತ್ತು ಶಿವಮೊಗ್ಗಕ್ಕೆ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ಹೊರಟು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 7.30ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲಿದ್ದಾರೆ.
ಚುನಾವಣಾಧಿಕಾರಿಯಾಗಿ ಶಿವಮೊಗ್ಗದ ಪತ್ರಕರ್ತ
ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಮಂಡಳಿ ಚುನಾವಣೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ಶಿವಮೊಗ್ಗದ ಪತ್ರಕರ್ತ ಎನ್.ರವಿಕುಮಾರ್ ನೇಮಕವಾಗಿದ್ದಾರೆ. ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಎಲ್ಲಾ ಸಂಘದ ಎಲ್ಲಾ ಜಿಲ್ಲಾ ಸಮಿತಿಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ. ಶೀಘ್ರದಲ್ಲೇ ಚುನಾವಣಾ ವೇಳಾಪಟ್ಟಿ ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
![]()
ಇದನ್ನೂ ಓದಿ » ಶಿವಮೊಗ್ಗಕ್ಕೆ 350ಕ್ಕೂ ಹೆಚ್ಚು ಡಾಕ್ಟರ್ಗಳು, ಎರಡು ದಿನ ಪ್ರಮುಖ ಚರ್ಚೆ, ಏನಿದು ಕಾರ್ಯಕ್ರಮ?
Morning News
