ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 9 FEBRUARY 2025
ಶಿವಮೊಗ್ಗ : ತರಬೇತಿ ವೇಳೆ ಪ್ಯಾರಾಚೂಟ್ ತೆರೆಯದೆ ಆಗಸದಿಂದ ಕೆಳಗೆ ಬಿದ್ದು ಹುತಾತ್ಮರಾದ ವಾಯುಪಡೆ (airforce) ವಾರಂಟ್ ಆಫೀಸರ್ ಜಿ.ಎಸ್.ಮಂಜುನಾಥ್ ಅವರ ಪಾರ್ಥೀವ ಶರೀರ ಶಿವಮೊಗ್ಗ ತಲುಪಿದೆ. ಹೊಳೆ ಬಸ್ ನಿಲ್ದಾಣದ ಬಳಿ ಬೆಕ್ಕಿನ ಕಲ್ಮಠದ ಬಳಿ ಜನಪ್ರತಿನಿಧಿಗಳು, ಶಿವಮೊಗ್ಗದ ನಾಗರಿಕರು ಮಂಜುನಾಥ್ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವರು ಅಗಲಿದ ಯೋಧನಿಗೆ ನಮನ ಸಲ್ಲಿಸಿದರು.

ಸಮವಸ್ತ್ರ ಹಿಡಿದು ಕಣ್ಣೀರಾದ ಪತ್ನಿ
ಶಿವಮೊಗ್ಗದಲ್ಲಿ ಅಂತಿಮ ನಮನ ಸಲ್ಲಿಸುವ ಸಂದರ್ಭ ವಾರಂಟ್ ಆಫೀಸರ್ ಜಿ.ಎಸ್.ಮಂಜುನಾಥ್ ಅವರ ಪತ್ನಿ ಕಲ್ಪಿತಾ ಸಾಕಿಯ ಇದ್ದರು. ಪತಿಯ ಪಾರ್ಥೀವ ಶರೀರದ ಮುಂದೆ ಅವರ ಸಮವಸ್ತ್ರ ಹಿಡಿದು ಉಮ್ಮಳಿಸಿ ಬಂದ ದುಃಖ ತಡೆಯಲಾಗದೆ ಕಣ್ಣೀರಾದರು. ಇದು ಸುತ್ತಲು ಇದ್ದವರ ಕಣ್ಣಾಲಿಗಳನ್ನು ತೇವಗೊಳಿಸಿತು.

ಹೊಸನಗರದತ್ತ ಪಾರ್ಥೀವ ಶರೀರ
ವಾರಂಟ್ ಆಫೀಸರ್ ಜಿ.ಎಸ್.ಮಂಜುನಾಥ್ ಅವರ ಪಾರ್ಥೀವ ಶರೀರವನ್ನು ಸೇನಾ ವಾಹನದಲ್ಲಿ ತರಲಾಗಿದೆ. ವಾಯುಪಡೆಯ ಅಧಿಕಾರಿಗಳು, ಜಿ.ಎಸ್.ಮಂಜುನಾಥ್ ಅವರ ಕುಟುಂಬ ಸದಸ್ಯರು ಜೊತೆಗಿದ್ದರು.

ಪಾರ್ಥೀವ ಶರೀರವನ್ನು ಹೊತ್ತ ವಾಹನ ಈಗ ಹೊಸನಗರದತ್ತ ತೆರಳಿತು. ಬಿಜೆಪಿ ಕಾರ್ಯಕರ್ತರು, ಶಿವಮೊಗ್ಗದ ನಾಗರಿಕರು, ಮಾಜಿ ಸೈನಿಕರು, ಸಂಸದ ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಸೇನಾ ವಾಹನದ ಜೊತೆಗೆ ಬೈಕ್ ಜಾಥಾದಲ್ಲಿ ನಡೆಸಿದರು.
ಇದನ್ನೂ ಓದಿ » ವಾಯುಪಡೆ ಅಧಿಕಾರಿ ಮಂಜುನಾಥ್ ಸಾವು, ಹೊಸನಗರದಲ್ಲಿ ನಾಳೆ ಮೆರವಣಿಗೆ, ಅಂತ್ಯಕ್ರಿಯೆಗೆ ಸಕಲ ಸಿದ್ಧತೆ
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು





