ರಾಜ್ಯಪಾಲರನ್ನು ಭೇಟಿಯಾದ ಸಂಸದ ರಾಘವೇಂದ್ರ, ಮಹತ್ವದ ಮನವಿ

ಶಿವಮೊಗ್ಗ: ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಜನರಿಗೆ ಸುಲಭವಾಗಿ ನ್ಯಾಯ ದೊರೆಯುವಂತಾಗಲು ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಬೇಕು ಎಂದು ಆಗ್ರಹಿಸಿ ಸಂಸದ ಬಿ.ವೈ.ರಾಘವೇಂದ್ರ ಅವರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಲೋಕ ಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಸಂಸದ ರಾಘವೇಂದ್ರ, ಶಿವಮೊಗ್ಗ ಜಿಲ್ಲೆಯ ಭೌಗೋಳಿಕ ಅನುಕೂಲತೆ ಹಾಗೂ ಇದು ಮಧ್ಯ ಕರ್ನಾಟಕದ ಪ್ರಮುಖ ಆಡಳಿತ, ಶೈಕ್ಷಣಿಕ, ವಾಣಿಜ್ಯ ಮತ್ತು ಸಾರಿಗೆ ಕೇಂದ್ರವಾಗಿ ಹೊರಹೊಮ್ಮಿರುವುದನ್ನು ವಿವರಿಸಿದರು. ಶಿವಮೊಗ್ಗದಲ್ಲಿ ಸರ್ಕ್ಯೂಟ್ ಪೀಠ ಸ್ಥಾಪನೆಯಾಗುವುದರಿಂದ ಶಿವಮೊಗ್ಗ ಮಾತ್ರವಲ್ಲದೆ ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಜನರಿಗೆ ಹಾಗೂ ನ್ಯಾಯಿಕ ವಲಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

Shimoga-MP-BY-Raghavendra-meets-Governor-Thawar-Chad-Ghelot.

ಶಿವಮೊಗ್ಗದಲ್ಲಿ ಪ್ರತ್ಯೇಕ ಸಂಚಾರ ಪೀಠ ಸ್ಥಾಪನೆಯಾಗುವವರೆಗೆ ಜಿಲ್ಲೆಯನ್ನು ಬೆಂಗಳೂರಿನ ಹೈಕೋರ್ಟ್ ಪ್ರಧಾನ ಪೀಠದ ವ್ಯಾಪ್ತಿಯಲ್ಲೇ ಮುಂದುವರಿಸಬೇಕು ಎಂದು ಸಂಸದ ರಾಘವೇಂದ್ರ ಒತ್ತಾಯಿಸಿದರು. ಮಂಗಳೂರಿನಲ್ಲಿ ಪ್ರಸ್ತಾವಿತ ನ್ಯಾಯಪೀಠದ ವ್ಯಾಪ್ತಿಗೆ ಶಿವಮೊಗ್ಗವನ್ನು ಸೇರಿಸುವುದಕ್ಕೆ ಸಾರ್ವಜನಿಕ ವಲಯದಿಂದ ವಿರೋಧ ವ್ಯಕ್ತವಾಗುತ್ತಿದೆ. ಮಂಗಳೂರಿಗಿಂತ ಬೆಂಗಳೂರು ಶಿವಮೊಗ್ಗದ ಜನರಿಗೆ ಸುಲಭವಾಗಿ ತಲುಪಬಹುದಾದ ಕೇಂದ್ರವಾಗಿದೆ ಎಂದು ಸಾರ್ವಜನಿಕರ ಭಾವನೆಗಳನ್ನು ರಾಜ್ಯಪಾಲರ ಗಮನಕ್ಕೆ ತಂದರು.

ಈ ಸಂದರ್ಭ ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಉಪಸ್ಥಿತರಿದ್ದರು.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion