ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಕಾರವಾರ ದರ್ಮ ಗುರುವಾಗಿ ಫಾ.ಡುಮಿಂಗ್ ಡಾಯಸ್
SHIVAMOGGA LIVE NEWS | 14 JANUARY 2024
SHIMOGA : ಕಾರವಾರ ಕೆಥೊಲಿಕ್ ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷರಾಗಿ ಶಿವಮೊಗ್ಗ ಕೆಥೊಲಿಕ್ ಧರ್ಮಕ್ಷೇತ್ರದ ಧರ್ಮ ಗುರುಗಳಾಗಿದ್ದ ಡುಮಿಂಗ್ ಡಾಯಸ್ ಅವರನ್ನು ಪೋಪ್ ಫ್ರಾನ್ಸಿಸ್ ಅವರು ನೇಮಕ ಮಾಡಿದ್ದಾರೆ. ಜೋಗ ಮೂಲದವರಾದ ಡುಮಿಂಗ್ ಡಾಯಸ್ ಅವರು, 1969ರಲ್ಲಿ ಸೆ.3 ರಂದು ಅಂಬ್ರೋಸ್ ಡಾಯಸ್ ಮತ್ತು
ಮರ್ಸಿಲಿನ್ ಡಾಯಸ್ ದಂಪತಿಗೆ ಜನಿಸಿದರು. 26 ವರ್ಷಗಳಿಂದ ಶಿವಮೊಗ್ಗ ಧರ್ಮ ಕ್ಷೇತ್ರದಲ್ಲಿ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಶಿವಮೊಗ್ಗ ಧರ್ಮ ಕ್ಷೇತ್ರದ ಪಾಲನಾ ಕೇಂದ್ರ ಸನ್ನಿಧಿಯಲ್ಲಿ ನಿರ್ದೇಶಕರಾಗಿದ್ದರು. ಡುಮಿಂಗ್ ಡಾಯಸ್ ಅವರಿಗೆ ಶಿವಮೊಗ್ಗ ಕೆಥೊಲಿಕ್ ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷ ಫ್ರಾನ್ಸಿಸ್ ಸೆರಾವೊ ಎಸ್.ಜೆ. ಹಾಗೂ ಕ್ರೈಸ್ತ ಸಮುದಾಯ ಅಭಿನಂದನೆ ಸಲ್ಲಿಸಿದೆ.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಒತ್ತಿ
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






