SHIVAMOGGA LIVE NEWS | CRIME | 15 ಏಪ್ರಿಲ್ 2022
ಶಿವಮೊಗ್ಗದಲ್ಲಿ ಮುಸ್ಲಿಂ ಯುವಕನ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ 13 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಹರ್ಷ ಹತ್ಯೆ ಪ್ರಕರಣದ ಬಳಿಕ ಉಂಟಾಗಿದ್ದ ಗಲಭೆ ಸಂಬಂಧ ಯುವಕನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಈತ ಸ್ಪೋಟಕ ಮಾಹಿತಿ ಬಾಯಿ ಬಿಟ್ಟಿದ್ದಾನೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
13 ಮಂದಿ ವಿರುದ್ಧ ಕೇಸ್
ರಾಖಿ ಎಂಬಾತನ ವಿಚಾರಣೆ ವೇಳೆ ಮುಸ್ಲಿಂ ಯುವಕನ ಹತ್ಯೆಗೆ ಸಂಚು ಕುರಿತು ಬಾಯಿ ಬಿಟ್ಟಿದ್ದ. ಈ ಹಿನ್ನೆಲೆಯಲ್ಲಿ ರಾಖಿ ಸೇರಿದಂತೆ ಶಿವಮೊಗ್ಗದ 13 ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರಾಖಿ ಸಿಕ್ಕಿಬಿದ್ದಿದ್ದು ಹೇಗೆ?
ಫೆ.21ರಂದು ಬೆಳಗ್ಗೆ 11.30ಕ್ಕೆ ಸೀಗೆಹಟ್ಟಿಯಲ್ಲಿ ಪತ್ರಕರ್ತ ಮೊಹಮದ್ ರಫಿ ಅವರ ಮೇಲೆ ಗುಂಪು ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ರಾಖಿ ಎಂಬಾತನ ವಿಚಾರಣೆ ನಡೆಸಲಾಗುತ್ತಿತ್ತು. ಆಗ ಮುಸ್ಲಿಂ ಯುವಕನ ಹತ್ಯೆಗೆ ಸಂಚು ರೂಪಿಸಿರುವುದಾಗಿ ಹೇಳಿಕೆ ನೀಡಿದ್ದಾನೆ ಎಂದು ಎಫ್ಐಆರ್ ದಾಖಲು ಮಾಡಲಾಗಿದೆ.
ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (CRIME)
ಇದನ್ನೂ ಓದಿ | ರಾತ್ರೋರಾತ್ರಿ ಶಿವಮೊಗ್ಗದಲ್ಲಿ ಸಂತೋಷ್ ಪಾಟೀಲ್’ಗೆ ಶ್ರದ್ಧಾಂಜಲಿ ಫ್ಲೆಕ್ಸ್ ಪ್ರತ್ಯಕ್ಷ, ಎಷ್ಟು ಕಡೆ ಫ್ಲೆಕ್ಸ್ ಹಾಕಲಾಗಿದೆ?
ಈ ಮೇಲ್ – [email protected]
WhatsApp Number – 7411700200