ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ, ಇಬ್ಬರು ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 DECEMBER 2023

SHIMOGA : ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಆರೋಪದ ಹಿನ್ನೆಲೆ ಕಟ್ಟಡವೊಂದರ ಮೇಲೆ ಪೊಲೀಸರು ದಾಳಿ ನಡೆಸಿದರು. ಗಾಂಧಿನಗರದ 1ನೇ ಪ್ಯಾರಲಲ್‌ ರಸ್ತೆಯ ಕಟ್ಟಡವೊಂದರ ನೆಲ ಮಾಳಿಗೆಯಲ್ಲಿ ದಂಧೆ ನಡೆಸುತ್ತಿರುವ ಆರೋಪದ ಹಿನ್ನೆಲೆ ದಾಳಿ ನಡೆಸಲಾಗಿದೆ.

ಜಯನಗರ ಠಾಣೆ ಇನ್ಸ್‌ಪೆಕ್ಟರ್‌ ಸಿದ್ದನಗೌಡ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. ಕಚೇರಿ ಮತ್ತು ಗೋಡೋನ್‌ಗಾಗಿ ಕಟ್ಟಡವೊಂದರ ನೆಲ ಮಾಳಿಗೆಯನ್ನು ಯುವಕನೊಬ್ಬ ಬಾಡಿಗೆಗೆ ಪಡೆದಿದ್ದ. ಅದರಲ್ಲಿಯೇ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ. ಪೊಲೀಸ್‌ ದಾಳಿ ಹಿನ್ನೆಲೆ ಗಾಂಧಿ ನಗರ ರಸ್ತೆಯಲ್ಲಿ ದೊಡ್ಡ ಸಂಖ್ಯೆಯ ಜನ ಸೇರಿದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸರಣಿ ಸರಗಳ್ಳತನ, 3 ಠಾಣೆ ವ್ಯಾಪ್ತಿಯಲ್ಲಿ 3 ಕಡೆ ಸರಗಳವು, ಒಂದು ಕಡೆ ವಿಫಲ ಯತ್ನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment