SHIVAMOGGA LIVE NEWS, 10 FEBRUARY 2025
ಶಿವಮೊಗ್ಗ : ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದ ಆರು ನಕ್ಸಲರ (Naxal) ಪೈಕಿ ಇಬ್ಬರು ನಕ್ಸಲರನ್ನ ಶಿವಮೊಗ್ಗ ಪೊಲೀಸರು ಇವತ್ತು ವಶಕ್ಕೆ ಪಡೆದಿದ್ದಾರೆ. ಇವತ್ತು ಮಧ್ಯಾಹ್ನ ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ನಕ್ಸಲರಾದ ಮುಂಡಗಾರು ಲತಾ ಮತ್ತು ವನಜಾಕ್ಷಿ ಬಾಳೆಹೊಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇವತ್ತು, ನಾಳೆ ನ್ಯಾಯಾಲಯಗಳಿಗೆ ಹಾಜರ್
ಮುಂಡಗಾರು ಲತಾ ಮತ್ತು ವನಜಾಕ್ಷಿ ಅವರನ್ನು ಇವತ್ತು ಮಧ್ಯಾಹ್ನ ಪೊಲೀಸರು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಮಂಗಳವಾರ ಪುನಃ ತೀರ್ಥಹಳ್ಳಿ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ. ಬುಧವಾರ ಹೊಸನಗರ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಮುಂಡಗಾರು ಲತಾ ಮತ್ತು ವನಜಾಕ್ಷಿ ವಿರುದ್ಧ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರಕರಣ, ಹೊಸನಗರ ಠಾಣೆ ವ್ಯಾಪ್ತಿಯಲ್ಲಿ ಒಂದು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ವಾಯುಸೇನೆ ಅಧಿಕಾರಿ ಮಂಜುನಾಥ್ ಪಂಚಭೂತಗಳಲ್ಲಿ ಲೀನ, ಇಲ್ಲಿದೆ ಇಡೀ ದಿನದ ಕಂಪ್ಲೀಟ್ ಮಾಹಿತಿ