ಸ್ಮಾರ್ಟ್ ಸಿಟಿಯಿಂದ ಶಿವಮೊಗ್ಗದ ರಾಗಿಗುಡ್ಡದಲ್ಲಿ ಜೈವಿಕ ಉದ್ಯಾನ, ಹೇಗಿರುತ್ತೆ? ಎಷ್ಟು ಎಕರೆಯಲ್ಲಿ ಉದ್ಯಾನವಾಗುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

117702852 1188438618184223 2807915213080176620 n.jpg? nc cat=111& nc sid=110474& nc ohc=VE0J8XyiMG0AX 36iLB& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಆಗಸ್ಟ್ 2020

ಶಿವಮೊಗ್ಗ ನಗರದಲ್ಲಿರುವ ರಾಗಿಗುಡ್ಡದಲ್ಲಿ ಲಭ್ಯವಿರುವ ಸುಮಾರು 20 ಎಕರೆ ಕಂದಾಯ ಜಮೀನಿನಲ್ಲಿ ಜೈವಿಕ ವನ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜೈವಿಕ ವನ ಅಭಿವೃದ್ಧಿ ಕುರಿತು ಜಿಲ್ಲಾಡಳಿತ ಸಭಾಂಗಣದಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಹಸಿರೀಕರಣಕ್ಕಾಗಿ 3.86 ಕೋಟಿ ರೂ. ಮೀಸಲಿರಿಸಲಾಗಿದ್ದು, ಇದನ್ನು ಬಳಸಿಕೊಂಡು ಜೈವಿಕ ವನ ಅಭಿವೃದ್ಧಿಪಡಿಲು ಉದ್ದೇಶಿಸಲಾಗಿದೆ. ಮಲೆನಾಡಿನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಉತ್ತಮ ಸಸಿಗಳನ್ನು ಬಳಸಿಕೊಂಡು ವನ ಅಭಿವೃದ್ಧಿಪಡಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಇದರಲ್ಲಿ ಮುಂದಿನ ಐದು ವರ್ಷಗಳ ನಿರ್ವಹಣೆಯೂ ಸೇರಿರಬೇಕು. ಒಟ್ಟು 7 ಸಾವಿರ ಸಸಿಗಳನ್ನು ನೆಡುವ ಗುರಿಯನ್ನು ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು.

117610612 1188459351515483 1880671465935144156 o.jpg? nc cat=111& nc sid=8024bb& nc ohc=alZg5awBwgIAX KKmTR& nc ht=scontent.fblr11 1

ರಾಗಿಗುಡ್ಡದ 112ರ ಸರ್ವೆ ನಂಬರಿನಲ್ಲಿ ಒಟ್ಟು 69 ಎಕರೆ ಜಮೀನು ಇದ್ದು, ಇದರಲ್ಲಿ ವಿವಿಧ ಉದ್ದೇಶಗಳಿಗಾಗಿ ಒಟ್ಟು 43 ಎಕರೆ ಈಗಾಗಲೇ ಮಂಜೂರು ಮಾಡಲಾಗಿದೆ. ಇದರಲ್ಲಿ 5 ಎಕರೆ  ಇಎಸ್‍ಐ ಆಸ್ಪತ್ರೆ, 8 ಎಕರೆ ಪ್ರಾದೇಶೀಕ ವಿಜ್ಞಾನ ಕೇಂದ್ರ, 5 ಎಕರೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಸೇರಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

ಇನ್ನೂ ಕೆಲವು ಪ್ರಸ್ತಾವನೆಗಳನ್ನು ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇಲ್ಲಿ 18 ಎಕರೆ ಲಭ್ಯವಿದ್ದು, ಜೈವಿಕ ಉದ್ಯಾನಕ್ಕೆ ಬಳಸಿಕೊಳ್ಳಬಹುದಾಗಿದೆ. ಇನ್ನೂ 2 ಎಕರೆ ಲಭ್ಯವಿದೆ. ಇದೇ ರೀತಿ ಉದ್ದೇಶಿತ ವಾಜಪೇಯಿ ಬಡಾವಣೆಯಲ್ಲಿ 10 ಎಕರೆ ಮೀಸಲು ಅರಣ್ಯವಿದ್ದು ಇಲ್ಲಿಯೂ ಸಸಿಗಳನ್ನು ನೆಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ರಾಗಿಗುಡ್ಡದಲ್ಲಿ ಸುಮಾರು 20ಗುಂಟೆ ಜಮೀನು ಒತ್ತುವರಿ ಮಾಡಿ 22ಮನೆಗಳನ್ನು ನಿರ್ಮಿಸಲಾಗಿದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.

ಸ್ಮಾರ್ಟ್ ಸಿಟಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಕೆ.ಪಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 12, 2020

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment