ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಆಗಸ್ಟ್ 2020
ಶಿವಮೊಗ್ಗ ನಗರದಲ್ಲಿರುವ ರಾಗಿಗುಡ್ಡದಲ್ಲಿ ಲಭ್ಯವಿರುವ ಸುಮಾರು 20 ಎಕರೆ ಕಂದಾಯ ಜಮೀನಿನಲ್ಲಿ ಜೈವಿಕ ವನ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೈವಿಕ ವನ ಅಭಿವೃದ್ಧಿ ಕುರಿತು ಜಿಲ್ಲಾಡಳಿತ ಸಭಾಂಗಣದಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಹಸಿರೀಕರಣಕ್ಕಾಗಿ 3.86 ಕೋಟಿ ರೂ. ಮೀಸಲಿರಿಸಲಾಗಿದ್ದು, ಇದನ್ನು ಬಳಸಿಕೊಂಡು ಜೈವಿಕ ವನ ಅಭಿವೃದ್ಧಿಪಡಿಲು ಉದ್ದೇಶಿಸಲಾಗಿದೆ. ಮಲೆನಾಡಿನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಉತ್ತಮ ಸಸಿಗಳನ್ನು ಬಳಸಿಕೊಂಡು ವನ ಅಭಿವೃದ್ಧಿಪಡಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಇದರಲ್ಲಿ ಮುಂದಿನ ಐದು ವರ್ಷಗಳ ನಿರ್ವಹಣೆಯೂ ಸೇರಿರಬೇಕು. ಒಟ್ಟು 7 ಸಾವಿರ ಸಸಿಗಳನ್ನು ನೆಡುವ ಗುರಿಯನ್ನು ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು.
ರಾಗಿಗುಡ್ಡದ 112ರ ಸರ್ವೆ ನಂಬರಿನಲ್ಲಿ ಒಟ್ಟು 69 ಎಕರೆ ಜಮೀನು ಇದ್ದು, ಇದರಲ್ಲಿ ವಿವಿಧ ಉದ್ದೇಶಗಳಿಗಾಗಿ ಒಟ್ಟು 43 ಎಕರೆ ಈಗಾಗಲೇ ಮಂಜೂರು ಮಾಡಲಾಗಿದೆ. ಇದರಲ್ಲಿ 5 ಎಕರೆ ಇಎಸ್‍ಐ ಆಸ್ಪತ್ರೆ, 8 ಎಕರೆ ಪ್ರಾದೇಶೀಕ ವಿಜ್ಞಾನ ಕೇಂದ್ರ, 5 ಎಕರೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಸೇರಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಇನ್ನೂ ಕೆಲವು ಪ್ರಸ್ತಾವನೆಗಳನ್ನು ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇಲ್ಲಿ 18 ಎಕರೆ ಲಭ್ಯವಿದ್ದು, ಜೈವಿಕ ಉದ್ಯಾನಕ್ಕೆ ಬಳಸಿಕೊಳ್ಳಬಹುದಾಗಿದೆ. ಇನ್ನೂ 2 ಎಕರೆ ಲಭ್ಯವಿದೆ. ಇದೇ ರೀತಿ ಉದ್ದೇಶಿತ ವಾಜಪೇಯಿ ಬಡಾವಣೆಯಲ್ಲಿ 10 ಎಕರೆ ಮೀಸಲು ಅರಣ್ಯವಿದ್ದು ಇಲ್ಲಿಯೂ ಸಸಿಗಳನ್ನು ನೆಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ರಾಗಿಗುಡ್ಡದಲ್ಲಿ ಸುಮಾರು 20ಗುಂಟೆ ಜಮೀನು ಒತ್ತುವರಿ ಮಾಡಿ 22ಮನೆಗಳನ್ನು ನಿರ್ಮಿಸಲಾಗಿದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.
ಸ್ಮಾರ್ಟ್ ಸಿಟಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಕೆ.ಪಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200