ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 31 JANUARY 2023
SHIMOGA | 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು (Sahitya Sammelana) ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಚಾಲುಕ್ಯ ನಗರದ ಸಾಹಿತ್ಯ ಗ್ರಾಮದಲ್ಲಿ ನಡೆಯಲಿದೆ. ಫೆ.1 ಮತ್ತು 2ರಂದು ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ರಿಪ್ಪನ್ ಪೇಟೆಯ ಹಿರಿಯ ಸಾಹಿತಿ ಲಕ್ಷ್ಮಣ ಕೊಡಸೆ ಅವರು ಸಮ್ಮೇಳನದ ಅಧ್ಯಕ್ಷರಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಮಂಜುನಾಥ್ ಅವರು, ಫೆ.1ರಂದು ಬೆಳಗ್ಗೆ 10 ಗಂಟೆಗೆ ಗೋಪಾಳ ಬಸ್ ನಿಲ್ದಾಣದಿಂದ ಸಾಹಿತ್ಯ ಗ್ರಾಮದವರೆಗೆ ಸಮ್ಮೇಳನ ಅಧ್ಯಕ್ಷರ ರಾಜಬೀದಿ ಉತ್ಸವ ನಡೆಯಲಿದೆ. ಉಪ ಮೇಯರ್ ಲಕ್ಷ್ಮಿ ಶಂಕರಾನಾಯ್ಕ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಬೆಳಗ್ಗೆ 10.30ಕ್ಕೆ ಸಮ್ಮೇಳನದ (Sahitya Sammelana) ಉದ್ಘಾಟನೆ ನಡೆಯಲಿದೆ. ಸಮ್ಮೇಳನ ಅಧ್ಯಕ್ಷ ಲಕ್ಷ್ಮಣ ಕೊಡಸೆ ಅವರು ಭಾಷಣ ಮಾಡಲಿದ್ದಾರೆ.
ಯಾವೆಲ್ಲ ಗೋಷ್ಠಿಗಳು ನಡೆಯಲಿವೆ?
ಸಮ್ಮೇಳನದಲ್ಲಿ ಫೆ.1ರಂದು ಹಾಲು ಹಳ್ಳ ಹರಿಯಲಿ, ಸಮ್ಮೇಳನಾಧ್ಯಕ್ಷರ ಬದುಕು – ಬರಹ, ಜಾನಪದ ಮರು ಓದು ಗೋಷ್ಠಿಗಳು ನಡೆಯಲಿವೆ. ಫೆ.2ರಂದು ಸಾಹಿತ್ಯ ಸಾಂಸ್ಕೃತಿಕ ಬಿಕ್ಕಟ್ಟುಗಳು, ಮಲೆನಾಡಿನ ಬೇಗುದಿಗಳು, ಜೇನು ಮಳಯು ಸುರಿಯಲಿ, ಪ್ರಚಲಿತ ಸಮಸ್ಯೆಗಳ ಕುರಿತು ಗೋಷ್ಠಿಗಳು ನಡೆಯಲಿವೆ.
ಸಮಾರೋಪ ಸಮಾರಂಭ
ಫೆ.2ರಂದು ಸಂಜೆ 6.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ.ಸಿದ್ಧರಾಮಯ್ಯ ಸಮಾರೋಪ ನುಡಿ ನುಡಿಯಲಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಮ್ಮೇಳನಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ – ತುಮಕೂರು ಹೆದ್ದಾರಿ ಕಾಮಗಾರಿಯ ಗುಂಡಿಯಲ್ಲಿ ಮೃತದೇಹ, ಕಾರೇಹಳ್ಳಿಯಲ್ಲಿ ಟೈರ್ ಗೆ ಬೆಂಕಿ, ಆಕ್ರೋಶ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422