ಶಿವಮೊಗ್ಗ ಸರ್ಜಿ ಮಕ್ಕಳ ಆಸ್ಪತ್ರೆಯ ಖ್ಯಾತ ತಜ್ಞ ವೈದ್ಯ ನಿಧನ, ಆಸ್ಪತ್ರೆ ಬಳಿ ಅಂತಿಮ ನಮನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 JANUARY 2023

ಶಿವಮೊಗ್ಗ : ನಗರದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತೀವ್ರ ನಿಗಾ ಘಟಕದ ತಜ್ಞ ವೈದ್ಯ, (doctor) ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್  ಡಾ. ಸತೀಶ್ (46) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆ ಅವರು ಚಿಕಿತ್ಸೆ ಪಡೆಯುತ್ತಿದ್ದರು.

Shimoga Sarji Hospital Dr Satish

ಬುಧವಾರ ಬೆಳಗ್ಗೆ ಡಾ. ಸತೀಶ್ ಅವರು ಕೊನೆಯುಸಿರೆಳೆದಿದ್ದಾರೆ. ಎಂಟು ವರ್ಷದಿಂದ ಸರ್ಜಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಶಿವಮೊಗ್ಗದ ಉತ್ತಮ ಮಕ್ಕಳ ತಜ್ಞ ಎಂದು ಖ್ಯಾತಿ ಸಂಪಾದಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ಸೇತುವೆ ಮೇಲೆ ವಿದ್ಯುತ್ ಕಂಬ, ಜಿಲ್ಲೆಯ ರೈಲ್ವೆ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು

ಡಾ. ಸತೀಶ್ ಅವರು ಮೂಲತಃ ದಾವಣಗೆರೆ ಜಿಲ್ಲೆಯ ತ್ಯಾವಣಗಿ ಗ್ರಾಮದವರು. ಪತ್ನಿ ಡಾ. ಚೇತನಾ ಅವರು ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞೆಯಾಗಿದ್ದಾರೆ. ಒಬ್ಬ ಮಗ, ಮಗಳು ಇದ್ದಾರೆ.

Shimoga Live News Reach 3 Million Views

ಗೋಪಾಳದ ರಂಗನಾಥ ಬಡಾವಣೆಯಲ್ಲಿರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 9 ಗಂಟೆಯಿಂದ 9.30ರವರೆಗೆ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯದಲ್ಲಿ ದರ್ಶನಕ್ಕೆ ಅವಕಾಶವಿರಲಿದೆ. ಬಳಿಕ ದಾವಣೆಗೆರೆಯ ತ್ಯಾವಣಗಿ ಗ್ರಾಮಕ್ಕೆ ತೆರಳಲಿದ್ದು, ಮಧ್ಯಾಹ್ನ ಅಂತ್ಯ ಸಂಸ್ಕಾರ ನೆರವೇರಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment