ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 NOVEMBER 2022
SHIMOGA | ಬೆಳ್ಳಂಬೆಳಗ್ಗೆ ಶಿವಮೊಗ್ಗ ಪೊಲೀಸರು ಆರೋಪಿ ಆಸ್ಲಂ ಮೇಲೆ ಗುಂಡು ಹಾರಿಸಿದ್ದಾರೆ. ಪೊಲೀಸ್ ಸಿಬ್ಬಂದಿ ರಮೇಶ್ ಅವರ ಮೇಲೆ ಹಲ್ಲೆ ಮಾಡಿದ ಅಸ್ಲಂ ಕಾಲಿಗೆ ಪಿಎಸ್ಐ ವಸಂತ್ ಅವರು ಗುಂಡು ಹೊಡೆದಿದ್ದಾರೆ. (firing on aslam)
ಘಟನೆ ಮಾಹಿತಿ ಲಭಿಸುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಪೊಲೀಸ್ ಸಿಬ್ಬಂದಿ ರಮೇಶ್ ಅವರ ಆರೋಗ್ಯ ವಿಚಾರಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ಮೂರು ಪ್ರಮುಖಾಂಶ ತಿಳಿಸಿದರು.
(firing on aslam)
ರಕ್ಷಣಾಧಿಕಾರಿ ಹೇಳಿದ್ದೇನು?
ಆರೋಪಿ ಅಸ್ಲಂಗೆ ಕ್ರಮಿನಲ್ ಹಿನ್ನಲೆ ಇದೆ. ಆತನ ವಿರುದ್ಧ ಈ ಹಿಂದೆ 9 ಪ್ರಕರಣ ದಾಖಲಾಗಿವೆ. ಅವುಗಳಲ್ಲಿ ಪ್ರಮುಖವಾಗಿ ಕೊಲೆ ಯತ್ನ ಪ್ರಕರಣಗಳಿವೆ. ಈಗಿನದ್ದು ಸೇರಿ 10 ಪ್ರಕರಣಗಳು ಅಸ್ಲಂ ವಿರುದ್ಧ ದಾಖಲಾಗಿದೆ. (firing on aslam)
ಬಿ.ಹೆಚ್.ರಸ್ತೆಯಲ್ಲಿ ಅಶೋಕ್ ಪ್ರಭು ಮೇಲಿನ ಹಲ್ಲೆ ಪ್ರಕರಣ ಸಂಬಂಧ ಶುಕ್ರವಾರ ಆರೋಪಿ ಆಸೀಫ್ ಎಂಬಾತನನ್ನು ಬಂಧಿಸಲಾಗಿತ್ತು. ಆತನಿಗು ಕ್ರಿಮಿನಲ್ ಹಿನ್ನೆಲೆ ಇದೆ. ಈ ಹಿಂದೆ ಎರಡು ಪ್ರಕರಣಗಳು ದಾಖಲಾಗಿವೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಮತ್ತೊಬ್ಬ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು
ಬೆಳಗ್ಗೆ ಪಿಎಸ್ಐ ವಸಂತ್ ಅವರಿಗೆ ಮತ್ತೊಬ್ಬ ಆರೋಪಿ ಅಸ್ಲಂ ಪುರಲೆಯಲ್ಲಿ ಬಡಾವಣೆಯೊಂದರಲ್ಲಿ ಅಡಗಿಕೊಂಡಿರುವ ಮಾಹಿತಿ ಲಭಿಸಿತ್ತು. ಆತನನ್ನು ಬಂಧಿಸಲು ಹೋಗಿದ್ದರು. ಆಗ ಚಾಕುವಿನಿಂದ ದೊಡ್ಡಪೇಟೆ ಠಾಣೆಯ ರಮೇಶ್ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಮತ್ತು ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆ ಹಿನ್ನೆಲೆ ಅಸ್ಲಂ ಕಾಲಿಗೆ ಗುಂಡು ಹೊಡೆದಿದ್ದಾರೆ.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















