ಪುಟ್ಟ ಪುಟ್ಟ ಮಕ್ಕಳ ಹೊತ್ತು, ರಣ ಬಿಸಿಲಿನಲ್ಲಿ 20 ಕಿ.ಮೀ ನಡೆದು ಹೋರಾಟ, ರೈತರ ಆಕ್ರೋಶಕ್ಕೆ ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 FEBRUARY 2024

SHIMOGA : ಸಕ್ಕರೆ ಕಾರ್ಖಾನೆ ಹೆಸರಿನಲ್ಲಿ ಸಾವಿರಾರು ಕುಟುಂಬಗಳನ್ನು ಒಕ್ಕಲೆಬ್ಬಿಸಲು ಮುಂದಾಗಿರುವುದನ್ನು ಖಂಡಿಸಿ ಸುಡು ಬಿಸಿಲಿನಲ್ಲಿ ರೈತರು ಪಾದಯಾತ್ರೆ, ಟ್ರಾಕ್ಟರ್ ರಾಲಿ ನಡೆಸಿದರು.

Shimoga Sugar Factory Farmers protest

ಸಕ್ಕರೆ ಕಾರ್ಖಾನೆ ರೈತರು ಮತ್ತು ಕಾರ್ಮಿಕರು, ನಿವಾಸಿಗಳ ಭೂ ಹಕ್ಕು ಹೋರಾಟ ಸಮಿತಿ ವತಿಯಿಂದ ಮಲವಗೊಪ್ಪದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರೈತರು ಪಾದಯಾತ್ರೆ ನಡೆಸಲಾಯಿತು. ಬಿ.ಹೆಚ್.ರಸ್ತೆ, ಅಮೀರ್ ಅಹಮದ್ ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು.

Shimoga Sugar Factory Farmers protest

ಸುಡು ಬಿಸಿಲಿನಲ್ಲಿ ನಡೆದ ಜನ

ಮಲವಗೊಪ್ಪದಿಂದ ಸುಡು ಬಿಸಿಲಿನಲ್ಲಿ ರೈತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮಕ್ಕಳು, ಮಹಿಳೆಯರು, ವೃದ್ಧರು ಕೂಡ ಪಾದಯಾತ್ರೆ ಮಾಡಿದರು. ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರು ರಾಲಿಯಲ್ಲಿ ಇದ್ದರು.

Shimoga Sugar Factory Farmers protest

ಡಿಸಿ ಕಚೇರಿ ಮುಂದೆ ಹೋರಾಟ

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನಾ ಸಭೆ ನಡೆಸಲಾಯಿತು. ಈ ಸಂದರ್ಭ ಹಲವು ಪ್ರಮುಖರು ಮಾತನಾಡಿದರು.

Shimoga Sugar Factory Farmers protest

ಕೆ.ಟಿ.ಗಂಗಾಧರ್, ರೈತ ಮುಖಂಡ : ಜಾಗ ಸಕ್ಕರೆ ಕಾರ್ಖಾನೆಗೆ ಸೇರಿದ್ದು ಎಂಬ ಕಥೆ ಆಲಿಬಾಬಾ ಮತ್ತು ಚಾಲೀಸ್ ಚೋರ್‌ನಂತಿದೆ. ಯಾರೋ ಒಬ್ಬನಿಗೆ ಸೂಟು ಬೂಟು ಹಾಕಿಸಿ ಕರೆತಂದು ಮಾಲೀಕ ಎಂದು ಬಿಂಬಿಸಲಾಗುತ್ತಿದೆ. ನಾಳೆಯಿಂದ ಪ್ರತಿ ಹಳ್ಳಿಯ ಮುಂದೆ ಭೂಮಿ ನಮ್ಮದು ಎಂಬ ಬೋರ್ಡ್ ಹಾಕಿ. ಆತನನ್ನು ಯಾರೂ ಊರಿಗೆ ಸೇರಿಸಬಾರದು. ಕೇವಲ ಭಾವನಾತ್ಮಕ ಹೋರಟ ನಡೆಸದೆ ಕಾನೂನಾತ್ಮಕ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು.

Shimoga Sugar Factory Farmers protest

ವಿಜಯಕುಮಾರ್, ಕಾಂಗ್ರೆಸ್ ಮುಖಂಡ : ಈ ವಿಚಾರವಾಗಿ ಹಲವು ಬಾರಿ ಅಡ್ವೊಕೇಟ್ ಜನರಲ್ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದ್ದೆವು. ರೈತರ ಪರವಾಗಿ ವಾದಿಸುವಂತೆ ತಿಳಿಸಲಾಗಿದೆ. ಸಕ್ಕರೆ ಕಾರ್ಖಾನೆ ಮಾಲೀಕ ಎಂದುಕೊಂಡವನ ಬಳಿ ಯಾವುದೆ ದಾಖಲೆ ಇಲ್ಲ. ಒಂದೇ ಒಂದು ಪಹಣಿ ಕೂಡ ಆತನ ಬಳಿ ಇಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರ ಸಮಯ ಪಡೆಯುತ್ತೇನೆ. ನಿಯೋಗ ಹೋಗಿ ಚರ್ಚೆ ನಡೆಸೋಣ.

Shimoga Sugar Factory Farmers protest

ಶಾರದಾ ಪೂರ್ಯಾನಾಯ್ಕ್, ಶಾಸಕಿ : ಅಧಿಕಾರಿಗಳು, ಹೋರಾಟ ಸಮಿತಿಯಿಂದ ದಾಖಲೆ ಪಡೆದು ಅಧ್ಯಯನ ಮಾಡಿ ಸದನದಲ್ಲಿ ವಿಷಯ ಪ್ರಸ್ತಾಪಿಸಿದೆ. ಹಲವು ಸಂಗತಿ ಮರೆಮಾಚಿ ತರಲಾಗಿರುವ ಆದೇಶವೆ ತಪ್ಪು. ಸಕ್ಕರೆ ಕಾರ್ಖಾನೆ ಶುರುವಾಗುವ ಮೊದಲೆ ಇದ್ದ ಗ್ರಾಮಗಳ ಪರಿಸ್ಥಿತಿ ಏನು. ಅವರ ಅಸ್ಥಿತ್ವ ಕಸಿದುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಹೋರಾಟಗಾರರ ನಡುವೆ ಒಗ್ಗಟ್ಟು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಎಚ್ಚರಿಕೆಯಿಂದ ಒಂದಾಗಿ ಹೋರಾಟ ನಡೆಸಬೇಕಿದೆ.

Shimoga Sugar Factory Farmers protest

ಹೋರಾಟ ಸಮಿತಿ ಅಧ್ಯಕ್ಷ ಎಂ.ಬಿ.ಕೃಷ್ಣಪ್ಪ, ಕುಮಾರ್, ಮಹಾದೇವ್, ಕೃಷ್ಣಮೂರ್ತಿ, ರಾಜಶೇಖರ್ ಸೇರಿದಂತೆ ಹಲವರು ಹೋರಾಟದಲ್ಲಿ‌ ಭಾಗವಹಿಸಿದ್ದರು.

Shimoga Sugar Factory Farmers protest

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 2 ಟೋಲ್‌ಗಳಲ್ಲಿ ಯಾವ್ಯಾವ ವಾಹನಕ್ಕೆ ಎಷ್ಟು ನಿಗದಿಯಾಗಿದೆ ದರ? ಇಲ್ಲಿದೆ ಲಿಸ್ಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 29, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment