ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇನ್ನು ಕೆಲವೆ ದಿನದಲ್ಲಿ ಶಿವಮೊಗ್ಗ ಜಿಲ್ಲೆಯು ರೈಲ್ವೆ ಮುಖ್ಯ ಕೇಂದ್ರಗಳಲ್ಲಿ ಒಂದಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಘವೇಂದ್ರ, ಜಿಲ್ಲೆಯ ರೈಲ್ವೆ ಯೋಜನೆಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.
ಕೋಚಿಂಗ್ ಟರ್ಮಿನಲ್ ಸ್ಥಾಪನೆ
ಮೂರು ಸಾವಿರ ಕಿ.ಮೀ ಸಂಚರಿಸಿದ ಬಳಿಕ ರೈಲುಗಳ ಸರ್ವಿಸ್ ಮಾಡಿಸಬೇಕಿದೆ. 78 ಕೋಟಿ ವೆಚ್ಚದಲ್ಲಿ ಶಿವಮೊಗ್ಗದಲ್ಲಿ ಕೋಚಿಂಗ್ ಟರ್ಮಿನಲ್ ಮತ್ತು ಸರ್ವಿಸ್ ಸ್ಟೇಷನ್ ಆರಂಭಿಸಲಾಗುತ್ತಿದೆ.
ಶಿವಮೊಗ್ಗ ಶಿಕಾರಿಪುರ ರಾಣೆಬೆನ್ನೂರು ರೈಲ್ವೆ ಯೋಜನೆಯ ಕಾರ್ಯವು ಪ್ರಗತಿಯಲ್ಲಿದೆ. ಶಿವಮೊಗ್ಗದಿಂದ ಶಿಕಾರಿಪುರದವರೆಗಿನ ಯೋಜನೆಯನ್ನು ಫೇಸ್ 1 ಎಂದು ಗುರುತಿಸಲಾಗಿದೆ. ಈ ವ್ಯಾಪ್ತಿಯಲ್ಲಿ 27 ಗ್ರಾಮಗಳು ಬರಲಿವೆ. ಈ ಪೈಕಿ 14 ಹಳ್ಳಿಯಲ್ಲಿ ಜಾಯಿಂಟ್ ಮೆಷರ್ಮೆಂಟ್ ಆಗಿದೆ. 8 ಗ್ರಾಮಗಳಲ್ಲಿ ಫೈನಲ್ ನೋಟಿಫಿಕೇಷನ್ ಆಗಿದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಹಾರ ವಿತರಿಸಿ ಭೂಮಿ ವಶಕ್ಕೆ ಪಡೆಯಲಾಗುತ್ತದೆ ಎಂದರು.
ಮೂರು ರೈಲ್ವೆ ಮೇಲ್ಸೇತುವೆ ನಿರ್ಮಾಣ
ಮೇಲ್ಸೇತುವೆ 1
ರೈಲ್ವೆ ಟ್ರಾಫಿಕ್ ಹೆಚ್ಚಾಗುವ ಹಿನ್ನೆಲೆ ನಾಲ್ಕು ಕಡೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲಾಗುತ್ತದೆ. ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಬಳಿ ಸವಳಂಗ ರಸ್ತೆಯಲ್ಲಿ 631 ಮೀಟರ್ ಉದ್ದದ ಮೇಲ್ಸೇತುವೆ ನಿರ್ಮಿಸಲಾಗುತ್ತದೆ. 60.76 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ ಎಂದರು.
ಮೇಲ್ಸೇತುವೆ 2
ಕಡದಕಟ್ಟೆ ಬಳಿ 564 ಮೀಟರ್ ಉದ್ದದ ಮೇಲ್ಸೇತುವೆಯನ್ನು 25.92 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ.
ಮೇಲ್ಸೇತುವೆ 3
ಶಿವಮೊಗ್ಗದ ಕಾಶಿಪುರದಲ್ಲಿ 493 ಮೀಟರ್ ಉದ್ದದ ಮೇಲ್ಸೇತುವೆಯನ್ನು 29.63 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.
ಮೇಲ್ಸೇತುವೆ 4
ರಾಷ್ಟ್ರೀಯ ಹೆದ್ದಾರಿ ಇಲಾಖೆ ವತಿಯಿಂದ ಶಿವಮೊಗ್ಗ ವಿದ್ಯಾನಗರ ರೈಲ್ವೆ ನಿಲ್ದಾಣದ ಬಳಿ 920 ಮೀಟರ್ ರೈಲ್ವೆ ಮೇಲ್ಸೇತುವೆಯನ್ನು 43.897 ಕೋಟಿ ವಚ್ಚದಲ್ಲಿ ನಿರ್ಮಿಸಲಾಗುತ್ತದೆ. ಕಳೆದ ವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಗಳಿಗೆ ಅನುಮೋದನೆ ದೊರಕಿದೆ ಎಂದು ರಾಘವೇಂದ್ರ ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]