ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 FEBRUARY 2023
SHIMOGA | ಸಹ್ಯಾದ್ರಿ ಕಾಲೇಜು ಆವರಣದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಂ (Science Museum) ಆರಂಭಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಸೈನ್ಸ್ ಮ್ಯೂಸಿಯಂ ಆರಂಭಕ್ಕೆ ಕೇಂದ್ರ ಸರ್ಕಾರ 6.55 ಕೋಟಿ ರೂ. ಮತ್ತು ರಾಜ್ಯ ಸರ್ಕಾರ 8.65 ಕೋಟಿ ರೂ. ಮಂಜೂರು ಮಾಡಿದೆ. ಅದರ ನಿರ್ವಹಣೆಗೆ ಪ್ರತ್ಯೇಕವಾಗಿ 3 ಕೋಟಿ ರೂ. ಮಂಜೂರಾಗಿದೆ. ಮೊದಲ ಹಂತದಲ್ಲಿ ಕೆಟಗರಿ 2 ವಿಭಾಗದ ಸೈನ್ಸ್ ಮ್ಯೂಸಿಯಂ ಸ್ಥಾಪಿಸಲಾಗಿದೆ. ಮುಂದೆ ಕೆಟಗರಿ 1ಕ್ಕೆ ಪರಿವರ್ತಿಸಲಾಗುತ್ತದೆ ಎಂದು ತಿಳಿಸಿದರು.
ವಿಜ್ಞಾನಕ್ಕೆ ಸಂಬಂಧಿಸಿದ ಕಾರ್ಯಾಗಾರ, ವಿಚಾರ ಸಂಕಿರಣ, ಸಂಶೋಧನೆಗಳಿಗೆ ಸೈನ್ಸ್ ಮ್ಯೂಸಿಯಂ (Science Museum) ಪೂರಕವಾಗಲಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಿಜ್ಞಾನ ಕುರಿತು ಹೆಚ್ಚು ತಿಳಿಯಲು ಅನುಕೂಲವಾಗಲಿದೆ ಎಂದರು.
ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನವುಲೆಗೆ ಶಿಫ್ಟ್
ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಈ ಹಿಂದೆ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಆರಂಭಿಸಲು ಯೋಜಿಸಲಾಗಿತ್ತು. ಇದಕ್ಕೆ ಪರ ವಿರೋಧ ಚರ್ಚೆಗಳು ಆಗಿದ್ದರು. ಈ ಯೋಜನೆಯನ್ನು ನವುಲೆ ಕೃಷಿ ಕಾಲೇಜು ಆವರಣಕ್ಕೆ ಶಿಫ್ಟ್ ಮಾಡಲಾಗಿದೆ. 70 ಕೋಟಿ ರೂ. ಮೊತ್ತದ ಯೋಜನೆಗೆ ಜಾಗ ಹಸ್ತಾಂತರವಾಗಬೇಕಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













