SHIVAMOGGA LIVE NEWS, 31 JANUARY 2024
ಶಿವಮೊಗ್ಗ : ನಗರದಲ್ಲಿ ಟ್ರಾಫಿಕ್ ಸಮಸ್ಯೆಗಳ ಕುರಿತು ಸಾರ್ವಜನಿಕರು ತಕ್ಷಣ ದೂರು ನೀಡಲು ಸಂಚಾರ ಪೊಲೀಸರು ಹೆಲ್ಪ್‌ಲೈನ್ (Helpline) ಆರಂಭಿಸಿದ್ದಾರೆ. ಈ ನಂಬರ್‌ಗೆ ಕರೆ ಮಾಡಬಹುದು ಅಥವಾ ವಾಟ್ಸಪ್ ಮೂಲಕ ದೂರು ಸಲ್ಲಿಸಬಹುದಾಗಿದೆ. ಕೂಡಲೆ ಸಂಚಾರ ಪೊಲೀಸರು ಪರಿಹಾರ ಒದಗಿಸಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಕೋಟೆ ಪೊಲೀಸ್ ಠಾಣೆ ಸಮೀಪ ಪೊಲೀಸ್ ಗೆಸ್ಟ್ ಹೌಸ್ ಆವರಣದಲ್ಲಿ ಆಯೋಜಿಸಿರುವ ಸಂಚಾರ ನಿಯಮಗಳ ಜಾಗೃತಿ ಪ್ರದರ್ಶನ ಉದ್ಘಾಟನೆ ಸಮಾರಂಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೆಲ್ಪ್‌ಲೈನ್ ನಂಬರ್ ಬಿಡುಗಡೆ ಮಾಡಿದರು.
ಶಿವಮೊಗ್ಗ ನಗರದಲ್ಲಿ ಯಾವುದೇ ಟ್ರಾಫಿಕ್ ಸಮಸ್ಯೆ ಉಂಟಾದರೆ 8277983404 ಮೊಬೈಲ್ ನಂಬರ್‌ಗೆ ಕರೆ ಅಥವಾ ವಾಟ್ಸಪ್ ಮೂಲಕ ಮೆಸೇಜ್ ಕಳುಹಿಸಬಹುದು. ಪೂರ್ವ ಮತ್ತು ಪಶ್ಚಿಮ ಸಂಚಾರ ಠಾಣೆಗಳಲ್ಲಿ ಎರಡು ಪ್ರತ್ಯೇಕ ಭದ್ರಾ ವಾಹನಗಳು ಸ್ಥಳಕ್ಕೆ ಆಗಮಿಸಲಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು.ಹೆಲ್ಪ್‌ಲೈನ್ ನಂಬರ್ ಹೇಗೆ ಕೆಲಸ ಮಾಡುತ್ತೆ?
8277983404 ಮೊಬೈಲ್ ನಂಬರ್ ಶಿವಮೊಗ್ಗ ನಗರಕ್ಕೆ ಮಾತ್ರ ಸೀಮಿತ. ಸಿಟಿಯಲ್ಲಿನ ಸಂಚಾರ ನಿಯಮ ಉಲ್ಲಂಘನೆ ಕುರಿತು ಈ ನಂಬರ್‌ಗೆ ಕರೆ ಅಥವಾ ವಾಟ್ಸಪ್ ಮಾಡಬಹುದು.ಏನೆಲ್ಲ ದೂರು ನೀಡಬಹುದು?
ರಸ್ತೆ ಅಪಘಾತಗಳ ಸಂದರ್ಭ ಸಹಾಯಕ್ಕೆ, ಟ್ರಾಫಿಕ್ ಜಾಮ್ ಉಂಟಾಗಿದ್ದರೆ, ಸಂಚಾರ ನಿಯಮ ಉಲ್ಲಂಘನೆಗಳು, ಆಟೋದಲ್ಲಿ ಮೀಟರ್ ಅಳವಡಿಸದಿರುವುದು ಸೇರಿದಂತೆ ಎಲ್ಲ ಬಗೆಯ ಸಂಚಾರ ನಿಯಮಗಳ ಉಲ್ಲಂಘನೆ ಕುರಿತು ಕರೆ ಮಾಡಿ ಮಾಹಿತಿ ನೀಡಬಹುದು. ಫೋಟೊಗಳನ್ನು ತೆಗೆದು ವಾಟ್ಸಪ್ ಮೂಲಕ ಕಳುಹಿಸಬಹುದು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ವಿಭಿನ್ನ ಜಾಗೃತಿ ಪ್ರದರ್ಶನ, ರಾಜ್ಯದಲ್ಲಿ ಇದೇ ಮೊದಲು ಇಂತಹ ಪ್ರಯತ್ನ, ಏನೇನಿದೆ?