SHIVAMOGGA LIVE NEWS | 21 FEBRURARY 2023
SHIMOGA : ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭೇಟಿ ಖಚಿತಗೊಂಡಿದೆ. ಫೆ.27ರಂದು ಬೆಳಗ್ಗೆ 11ಕ್ಕೆ ಪ್ರಧಾನಿ ಮೋದಿ ಅವರ ವಿಮಾನವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಫೆ.27ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬೆಳಗ್ಗೆ 11 ಗಂಟೆಗೆ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಧ್ಯಾಹ್ನ 1 ಗಂಟೆಗೆ ಬೆಳಗಾವಿಗೆ ನಿರ್ಗಮಿಸಲಿದ್ದಾರೆ ಎಂದು ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
10 ಗಂಟೆಗೆ ಗೇಟ್ ಬಂದ್
ಶಿವಮೊಗ್ಗ ವಿಮಾನ ನಿಲ್ದಾಣ ಸೇರಿದಂತೆ ವಿವಿಧ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ 3 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. 3 ಸಾವಿರ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬರುವವರು ಬೆಳಗ್ಗೆ 10 ಗಂಟೆಯೊಳಗೆ ವಿಮಾನ ನಿಲ್ದಾಣದ ಆವರಣಕ್ಕೆ ಬರಬೇಕು. ಭದ್ರತೆ ದೃಷ್ಟಿಯಿಂದ ಬೆಳಗ್ಗೆ 10 ಗಂಟೆಗೆ ವಿಮಾನ ನಿಲ್ದಾಣದ ಗೇಟ್ ಬಂದ್ ಮಾಡಲಾಗುತ್ತದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಉಪಹಾರ, ನೀರು, ಪಾನೀಯದ ವ್ಯವಸ್ಥೆ ಮಾಡಲಾಗುತ್ತದೆ.
ಕಾರ್ಯಕ್ರಮಕ್ಕೆ ಯಾರೆಲ್ಲ ಬರ್ತಾರೆ?
ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆ ರಾಜ್ಯದ ಕೇಂದ್ರ ಸಚಿವರು, ಕೇಂದ್ರ ವಿಮಾನಯಾನ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು ಪಾಲ್ಗೊಳ್ಳುವ ನಿರೀಕ್ಷೆ ಎಂದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇವತ್ತಿನಿಂದಲೇ ಬರುತ್ತೆ ವಿಮಾನ