ಕುರುಬರನ್ನು ಎಸ್‌.ಟಿಗೆ ಸೇರಿಸಬೇಡಿ, ಶಿವಮೊಗ್ಗದಲ್ಲಿ ಮೆರವಣಿಗೆ, ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಕುರುಬರು ಸೇರಿದಂತೆ ಬೇರೆ ಸಮುದಾಯದವರನ್ನು ಪರಿಶಿಷ್ಟ ಪಂಗಡದ (ಎಸ್‌ಟಿ) ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಜಿಲ್ಲಾ ನಾಯಕ ವಾಲ್ಮೀಕಿ (Valmiki) ಸಂಘದ ನೇತೃತ್ವದಲ್ಲಿ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು. 

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಗೆ ಅವರಿಗೆ ಮನವಿ ಸಲ್ಲಿಸಿದರು.

ವಾಲ್ಮೀಕಿ ಸಮುದಾಯದ ಡಿಮಾಂಡ್‌ ಏನು?

  • ಹಿಂದುಳಿದ ವರ್ಗಗಳ ಪ್ರವರ್ಗ 1 ರಲ್ಲಿರುವ ಬೆಸ್ತ, ಅಂಬಿಗ, ಕಬ್ಬಲಿಗ, ಕೋಲಿ ಜಾತಿಯವರಿಗೆ ನಾಯಕ ತಳವಾರರ ಹೆಸರಿನಲ್ಲಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರಗಳನ್ನು ನೀಡಲಾಗುತ್ತಿದೆ. ಅದನ್ನು ಕೂಡಲೇ ನಿಲ್ಲಿಸಬೇಕು.
  • ಪರಿಶಿಷ್ಟ ವರ್ಗಕ್ಕೆ ಸೇರಿಸುವಂತೆ ಅನೇಕ ಜಾತಿಗಳು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿವೆ. ಈ ಒತ್ತಡಕ್ಕೆ ಸರ್ಕಾರ ಮಣಿಯಬಾರದು.

Nayaka-Community-Protest-in-Shimoga.

ಕುರುಬ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಶಿಫಾರಸು ಮಾಡುತ್ತಾರೆ. ನಾವು ಹೇಗೋ ಹೋರಾಟ ಮಾಡಿ ನಮ್ಮ ಮೀಸಲಾತಿಯನ್ನು ಶೇ 7.5ರಷ್ಟು ಪಡೆಯುತ್ತಿದ್ದೆವು. ಈಗ ಕುರುಬರು ನಮ್ಮ ಪರಿಶಿಷ್ಟ ವರ್ಗದ ಪಟ್ಟಿಗೆ ಬಂದರೆ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತದೆ.

  • ಹೆಚ್.ಆರ್.ಹನುಮಂತಪ್ಪ, ವಾಲ್ಮೀಕಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ

RED-LINE-

ಮುಖಂಡರಾದ ಬಿ.ಎಸ್.ನಾಗರಾಜ್, ಹರೀಶ್, ಡಿ.ಬಿ.ಹಳ್ಳಿ ಬಸವರಾಜಪ್ಪ, ಶೇಖರಪ್ಪ, ಸುರೇಶ್, ಲಕ್ಷ್ಮಣಪ್ಪ, ನಿಜಲಿಂಗಪ್ಪ, ರಂಗಪ್ಪ, ಹನುಮಂತಪ್ಪ, ಗೋಪಿ, ದುರ್ಗಪ್ಪ, ಮಲ್ಲೇಶ್ ಸೇರಿದಂತೆ ಹಲವರಿದ್ದರು.

ಇದನ್ನೂ ಓದಿ » ಭದ್ರಾವತಿಯ 19 ವರ್ಷದ ಯುವಕನಿಗೆ 20 ವರ್ಷ ಜೈಲು, ಈತ ಮಾಡಿದ ಅಪರಾಧವೇನು?

JNNCE-Admission-Advt-scaled

Valmiki

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment