ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ವರ್ಗಾವಣೆ, ನೂತನ ಸಿಇಒ ಯಾರು?

ಶಿವಮೊಗ್ಗ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಅವರಿಂದ ತೆರವಾಗಿರುವ ಸ್ಥಾನಕ್ಕೆ ಐಎಎಸ್‌ ಅಧಿಕಾರಿ ರಿಶಿ ಆನಂದ್‌ ಅವರನ್ನು ನೇಮಕ ಮಾಡಲಾಗಿದೆ.

ಎನ್.ಹೇಮಂತ್‌ ಅವರನ್ನು ಹುಬ್ಬಳ್ಳಿಯ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. 2020ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಎನ್.ಹೇಮಂತ್‌ ಅವರು 2024ರ ಜುಲೈ ತಿಂಗಳಿನಿಂದ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಜವಾಬ್ದಾರಿ ನಿಭಾಯಿಸಿದ್ದರು.

Shivamogga-Zilla-Panchayath-Building

ಯಾರು ನೂತನ ಸಿಇಒ?

ಜಾರ್ಖಂಡ್‌ ಮೂಲದ ರಿಶಿ ಆನಾಂದ್‌ ಅವರು 2020ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್‌ ಅಧಿಕಾರಿ. ಪ್ರಸ್ತುತ ವಿಜಯಪುರದ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.