ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 30 JULY 2024 : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯ ಶಿವಮೊಗ್ಗ ಹಾಲು ಒಕ್ಕೂಟದ (ಶಿಮುಲ್) ಆಡಳಿತ ಮಂಡಳಿ ಚುನಾವಣೆಗೆ (Election) ದಿನಾಂಕ ಪ್ರಕಟಿಸಲಾಗಿದೆ. ಇವತ್ತಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮತದಾನ ಯಾವಾಗ?
ಮುಂದಿನ ಐದು ವರ್ಷಕ್ಕೆ ಶಿಮುಲ್ನ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆಯಾಗಲಿದೆ. ಜುಲೈ 30ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆಗಸ್ಟ್ 6ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಆ.8ರಂದು ನಾಮಪತ್ರ ವಾಪಸ್ ಪಡೆಯಬಹುದು. ಆ.14ರಂದು ಮತದಾನ ನಡೆಯಲಿದೆ. ಬಳಿಕ ಮತ ಎಣಿಕೆ ಕಾರ್ಯ ನಡೆಯಲಿದ್ದು, ಫಲಿತಾಂಶ ಪ್ರಕಟಿಸಲಾಗುತ್ತದೆ. ಚುನಾವಣ ಅಧಿಕಾರಿಯಾಗಿ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರನ್ನು ನೇಮಕ ಮಾಡಲಾಗಿದೆ.
ಮೂರು ಜಿಲ್ಲೆಯಿಂದ 14 ನಿರ್ದೇಶಕರು
ಶಿಮುಲ್ ಆಡಳಿತ ಮಂಡಳಿಗೆ ಒಟ್ಟು 14 ನಿರ್ದೇಶಕರನ್ನು ಆಯ್ಕೆ ಮಾಡಲಾಗುತ್ತದೆ. ಮೂರು ಜಿಲ್ಲೆಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಿ ನಿರ್ದೇಶರನ್ನು ಚುನಾಯಿಸಲಾಗುತ್ತದೆ. ಶಿವಮೊಗ್ಗ, ಭದ್ರಾವತಿ ವಿಭಾಗಗಳಿಂದ ತಲಾ ಮೂವರು, ದಾವಣಗೆರೆ ಮತ್ತು ಚಿತ್ರದುರ್ಗ ವಿಭಾಗಗಳಿಂದ ತಲಾ ನಾಲ್ವರು ನಿರ್ದೇಶಕರನ್ನು ಆಯ್ಕೆ ಮಾಡಬೇಕಾಗುತ್ತದೆ.
ಯಾರು ಮತದಾನ ಮಾಡಬಹುದು?
ಶಿಮುಲ್ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರತಿನಿಧಿಗಳು ನಿರ್ದೇಶಕರನ್ನು ಆಯ್ಕೆ ಮಾಡಬಹುದಾಗಿದೆ. ಒಕ್ಕೂಟದಲ್ಲಿ 1406 ಸಂಘಗಳಿವೆ. ಈ ಪೈಕಿ 1171 ಸಂಘಗಳು ಮತದಾನದ ಹಕ್ಕು ಪಡೆದುಕೊಂಡಿವೆ. 235 ಸಂಘಗಳು ಮತದಾನಕ್ಕೆ ಅನರ್ಹಗೊಂಡಿವೆ. ಮತದಾನಕ್ಕೆ ಅರ್ಹವಾಗಿರುವ ಸಂಘಗಳು ತಮ್ಮ ಒಬ್ಬ ಪ್ರತಿನಿಧಿಯನ್ನು ಮತದಾರರನ್ನಾಗಿ ಆಯ್ಕೆ ಮಾಡುತ್ತವೆ. ಈ ಪ್ರತಿನಿಧಿಯು ಒಬ್ಬ ನಿರ್ದೇಶಕರನ್ನು ಆಯ್ಕೆ ಮಾಡಬಹುದಾಗಿದೆ.
ಮತದಾನ ಹೇಗೆ ನಡೆಯಲಿದೆ?
ಒಕ್ಕೂಟವನ್ನು ನಾಲ್ಕು ವಿಭಾಗವಾಗಿ ವಿಂಗಡಿಸಲಾಗಿದೆ. ಶಿವಮೊಗ್ಗ ವಿಭಾಗಕ್ಕೆ ತೀರ್ಥಹಳ್ಳಿ, ಭದ್ರಾವತಿ, ಶಿವಮೊಗ್ಗ ತಾಲೂಕು ಸೇರಲಿವೆ. ಸಾಗರ ವಿಭಾಗಕ್ಕೆ ಸೊರಬ, ಸಾಗರ, ಹೊಸನಗರ, ಶಿಕಾರಿಪುರ ತಾಲೂಕು ಸೇರಲಿವೆ. ದಾವಣಗೆರೆ ವಿಭಾಗಕ್ಕೆ ಹರಿಹರ, ದಾವಣಗೆರೆ, ಹೊನ್ನಾಳಿ, ನ್ಯಾಮತಿ, ಚನ್ನಗಿರಿ, ಜಗಳೂರು ತಾಲೂಕು ಸೇರಲಿವೆ. ಚಿತ್ರದುರ್ಗ ವಿಭಾಗಕ್ಕೆ ಹೊಳಲ್ಕೆರೆ, ಚಿತ್ರದುರ್ಗ, ಹೊಸದುರ್ಗ, ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು ತಾಲೂಕು ಸೇರಲಿವೆ. ಪ್ರತಿ ವಿಭಾಗದಿಂದ ಅತಿ ಹೆಚ್ಚು ಮತ ಪಡೆದವರನ್ನು ಆಯ್ಕೆ ಮಾಡಲಾಗುತ್ತದೆ.