ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 ಫೆಬ್ರವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟವು ರೈತರಿಗೆ ಮಹಾಶಿವರಾತ್ರಿ ಹಬ್ಬದ ಕೊಡುಗೆ ನೀಡಿದೆ. ಮಾರ್ಚ್ 1 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್’ಗೆ 2.50 ರೂ. ಹೆಚ್ಚಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿಮುಲ್’ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಶಿಮುಲ್ ಅಧ್ಯಕ್ಷ ಶ್ರೀಪಾದರಾವ್ ತಿಳಿಸಿದರು ಅವರು, ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಕಾಲ ಕಾಲಕ್ಕೆ ದರ ಪರಿಷ್ಕರಿಸುತ್ತಾ ಬಂದಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಪ್ರಗತಿಯಾಗಿದ್ದು ಫೆ.28 ರಂದು ನಡೆದ ಒಕ್ಕೂಟದ 416 ನೇ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಪ್ರಸ್ತುತ ದರ ಕೆ.ಜಿ ಒಂದಕ್ಕೆ ರೂ. 25.63 ಇದ್ದು ಇದನ್ನು ಪ್ರತಿ ಕೆ.ಜಿ ಗೆ ರೂ.27.86 ಕ್ಕೆ (ಫ್ಯಾಟ್ 3.5% ಎಸ್ಎಫ್ಎನ್ 8.50 ಇರುವ ಹಾಲು)ಹೆಚ್ಚಿಸಲಾಗಿದೆ. ಈ ಪರಿಷ್ಕೃತ ದರವು ಮಾ.1 ರಿಂದ ಜಾರಿಗೆ ಬರಲಿದೆ. ಹೆಚ್ಚು ಹಾಲಿನ ಉತ್ಪಾದನೆ ಮತ್ತು ಹೆಚ್ಚು ಮಾರಾಟದ ಉದ್ದೇಶದಿಂದ ಹಾಗೂ ರೈತರಿಗೆ ಉತ್ತಮ ಆದಾಯ ನೀಡುವ ದೃಷ್ಟಿಯಿಂದ ಒಕ್ಕೂಟ ದರ ಹೆಚ್ಚಳದ ತೀಮರ್ಾನ ಕೈಗೊಂಡಿದೆ.
1.65 ಲಕ್ಷ ರೈತರು
ಒಕ್ಕೂಟದ ವ್ಯಾಪ್ತಿಯಲ್ಲಿ 1.65 ಲಕ್ಷ ರೈತರಿದ್ದು 1360 ಸೊಸೈಟಿಗಳಿವೆ. ಪ್ರತಿ ದಿನ ಗುಣಮಟ್ಟದ ಹಾಲನ್ನು ರೈತರಿಂದ ಸ್ವೀಕರಿಸಲಾಗುತ್ತಿದೆ. ಈಗ ಹೆಚ್ಚಿಸಿರುವ ದರದಿಂದ ಶಿಮುಲ್ ಪ್ರತಿ ತಿಂಗಳು 4.6 ಕೋಟಿ ರೂ. ಹೆಚ್ಚುವರಿ ಹಣ ಪಾವತಿಸಬೇಕಿದೆ. ಜನವರಿ ತಿಂಗಳಲ್ಲಿ ಒಕ್ಕೂಟಕ್ಕೆ 5.5 ಕೋಟಿ ರೂ., ಫೆಬ್ರವರಿಯಲ್ಲಿ 1.75 ಕೋಟಿ ರೂ. ಲಾಭ ಆಗಿದೆ.
ಮಾರ್ಚ್ ಅಂತ್ಯಕ್ಕೆ 2022 ನೇ ಸಾಲಿಗೆ ಅಂದಾಜು ರೂ. 65 ರಿಂದ 70 ಕೋಟಿ ನಿವ್ವಳ ಲಾಭವಾಗಲಿದೆ. ನಂದಿನಿ ಹಾಲು ಮತ್ತು ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದಿಂದ ಕೂಡಿದ್ದು, ಗುಣಮಟ್ಟದಲ್ಲಿ ರಾಜ್ಯದಲ್ಲಿ 2 ನೇ ಸ್ಥಾನದಲ್ಲಿದೆ. ನಂದಿನಿ ಹಾಲಿಗೆ ಹೊರ ರಾಜ್ಯಗಳಿಂದ ಸಹ ಬೇಡಿಕೆ ಹೆಚ್ಚುತ್ತಿದೆ. ಇದೀಗ ದೆಹಲಿ, ಕೇರಳ, ತೆಲಂಗಾಣಗಳಿಗೆ ನಮ್ಮ ಹಾಲು ಹೋಗುತ್ತಿದೆ. ನಂದಿನಿ ಹಾಲನ್ನು ಪ್ರತಿ ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಸಹ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.
ಹಾಲಿನ ಪೌಡರ್ ಘಟಕ
ಶಿಮುಲ್ ಹಾಲು ಘಟಕದಲ್ಲಿ 150 ಕೋಟಿ ವೆಚ್ಚದಲ್ಲಿ ಹಾಲಿನ ಪೌಡರ್ ಘಟಕ ಸ್ಥಾಪಿಸಲು ಸರಕಾರಕ್ಕೆ ಮನವಿ ಮಾಡಲಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಅವರು ಕೂಡ ನಮ್ಮ ಪರವಾಗಿ ಮನವಿ ಮಾಡಿದ್ದಾರೆ. ದಾವಣಗೆರೆಯಲ್ಲಿ 3 ಲಕ್ಷ ಲೀಟರ್ ಹಾಲು ಸಂಗ್ರಹಣಾ ಘಟಕ ಸ್ಥಾಪನೆಗೆ 300 ಕೋಟಿ ಅಗತ್ಯವಿದೆ. ಅದನ್ನು ಸರಕಾರದ ಗಮನಕ್ಕೆ ತಂದಿದ್ದೇವೆ.
ಸರಕಾರ ಅನುದಾನ ನೀಡಿದರೆ ರೈತರಿಗೆ ಇನ್ನಷ್ಟು ಅನುಕೂಲವಾಗಲಿದೆ. ಹಾಲು ಉತ್ಪಾದನಾ ವೆಚ್ಚ ಡಬಲ್ ಆಗಿದೆ. ರೈತರಿಗೆ ಈಗಿರುವ ದರ ಸಾಕಾಗುತ್ತಿಲ್ಲ. ಸರಕಾರ ರೈತರ ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು. ಹಾಲಿದ ದರ ಹೆಚ್ಚಳ ಮಾಡಿದರೆ ರೈತರಿಗೆ ಇನ್ನಷ್ಟು ಲಾಭ ಸಿಗಲಿದೆ ಎಂದು ಶಿಮುಲ್ ಅಧ್ಯಕ್ಷ ಶ್ರೀಪಾದರಾವ್ ತಿಳಿಸಿದರು.
ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಬಸವರಾಜಪ್ಪ ಮಾತನಾಡಿ, ನಂದಿನಿ ಹಾಲಿನ ಬ್ರಾಂಡ್ ಹಳ್ಳಿ ಮಟ್ಟಕ್ಕೆ ಕೊಂಡೊಯ್ಯಲು ಯೋಜನೆ ರೂಪಿಸಲಾಗಿದೆ. ನಂದಿನಿ ಔಟ್ಲೇಟ್ ಪ್ರಾಂಚೈಸಿ ಬೇಕಾದವರು ಸಂಪರ್ಕಿಸಿದರೆ, ಅವರಿಗೆ ಬೇಕಾದ ಉಪಕರಣ ಹಾಗೂ ಬ್ರಾಂಡಿಂಗ್ ಮಾಡಿಕೊಡಲಾಗುವುದು. ಉತ್ತಮ ದರ್ಜೆಯ ಹಾಲಿನ ಕಾರಣಕ್ಕೆ ಹೊರ ರಾಜ್ಯಗಳಿಂದಲೂ ಹಾಲಿಗೆ ಬೇಡಿಕೆ ಇದೆ ಎಂದರು.
ಶಿವಮೊಗ್ಗ ಹಾಲು ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರುಗಳು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.