ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 JANUARY 2023
SHIMOGA | ಉತ್ಪಾದಕರಿಂದ ಖರೀದಿಸುವ ಹಾಲಿನ (MILK) ದರವನ್ನು ಪರಿಷ್ಕರಿಸಿಲಾಗಿದೆ. ಪ್ರತಿ ಕೆ.ಜಿ. ಹಾಲಿಗೆ 1.50 ರೂ. ಹೆಚ್ಚಳ ಮಾಡಲಾಗಿದೆ ಎಂದು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (SHIMUL) ಪ್ರಕಟಣೆಯಲ್ಲಿ ತಿಳಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಜ.16ರಂದು ಅಧ್ಯಕ್ಷ ಶ್ರೀಪಾದ್ ರಾವ್ ಅವರ ನೇತೃತ್ವದಲ್ಲಿ ನಡೆದ ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಉತ್ಪಾದಕರಿಂದ ಹಾಲು (MILK) ಖರೀದಿ ದರವನ್ನು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. ದರ ಹೆಚ್ಚಳದಿಂದ ಒಕ್ಕಟದಿಂದ ಸಂಘಗಳಿಗೆ ಪ್ರತಿ ಕೆ.ಜಿ. ಹಾಲಿಗೆ 33.71 ರೂ. ದರ ನೀಡಲಾಗುತ್ತದೆ. ಸಂಘಗಳಿಂದ ಉತ್ಪಾದಕರಿಗೆ ಪ್ರತಿ ಕೆ.ಜಿ. ಹಾಲಿಗೆ 31.85 ರೂ. ದರ ನಿಗದಿಪಡಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ಹಾಲು ಉತ್ಪಾದಕರಿಗೆ ಇದರ ಲಾಭ ದೊರೆಯಲಿದೆ. ಜ.21ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಶಿಮುಲ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಂದಿನಿ ಸಿಹಿ ಲಸ್ಸಿ
ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷ ಎನ್.ಹೆಚ್.ಶ್ರೀಪಾದ ರಾವ್, ಉಪಾಧ್ಯಕ್ಷ ಹೆಚ್.ಕೆ.ಬಸಪ್ಪ, ನಿರ್ದೇಶಕರಾದ ಸಿ.ವೀರಭದ್ರ ಬಾಬು, ಡಿ.ಆನಂದ್, ವಿದ್ಯಾಧರ, ಜಗದೀಶಪ್ಪ ಬಣಕಾರ್, ಟಿ.ಶಿವಶಂಕರಪ್ಪ, ಪಿ.ತಿಪ್ಪೇಸ್ವಾಮಿ, ಹೆಚ್.ಬಿ.ದಿನೇಶ್, ಬಿ.ಜಿ.ಬಸವರಾಜಪ್ಪ, ಕೆ.ಎ.ತಾರಾನಾಥ, ಕೆ.ಎನ್.ಸೋಮಶೇಖರಪ್ಪ, ಜಿ.ಪಿ.ಯಶವಂತರಾಜು, ಎನ್.ಹೆಚ್.ಭಾಗ್ಯ, ಎಂ.ಸಿದ್ದಲಿಂಗಪ್ಪ, ಎನ್.ಡಿ.ಹರೀಶ್, ವ್ಯವಸ್ಥಾಪಕ ನಿರ್ದೇಶಕ ಡಾ. ಕೆ.ಎಸ್.ಬಸವರಾಜ, ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ. ಎಸ್.ಬಿ.ಯಲಿ, ಉಪ ನಿಬಂದಕ ವಾಸುದೇವ, ಕರ್ನಾಟಕ ಹಾಲು ಮಹಾಮಂಡಳದ ಪ್ರತಿನಿಧಿ ಬಿ.ಟಿ.ಕಿಶೋರ್, ಒಕ್ಕೂಟ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವಾಹನ ಸವಾರರಿಗೆ ಗುಲಾಬಿ ಹೂವು ನೀಡಿದ ಪೊಲೀಸ್