ಮೂರು ಜಿಲ್ಲೆಯ ರೈತರಿಗೆ ಶಿವಮೊಗ್ಗ ಹಾಲು ಒಕ್ಕೂಟದಿಂದ ಸಂಕ್ರಾಂತಿ ಗಿಫ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JANUARY 2021

ಶಿವಮೊಗ್ಗ ಹಾಲು ಒಕ್ಕೂಟವು (ಶಿಮುಲ್) ಹಾಲು ಉತ್ಪಾದಕ ರೈತರಿಗೆ ಸಂಕ್ರಾಂತಿ ಕೊಡುಗೆಯಾಗಿ ಹಾಲಿನ ದರವನ್ನು 2.75 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ.

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯನ್ನು ಒಳಗೊಂಡ ಶಿಮುಲ್‍ನ ಮುಖ್ಯ ಕಚೇರಿಯಲ್ಲಿ ನಡೆದ ನಿರ್ದೆಶಕ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ದರ ಜ.13ರಿಂದ ಜಾರಿಗೆ ಬರಲಿದೆ.

ರೈತರಿಗೆ ಪ್ರಸ್ತುತ ಲೀಟರ್‌ಗೆ  22.50 ರೂ. ಸಿಗುತ್ತಿತ್ತು. ಜ.13ರಿಂದ ಲೀಟರ್‌ಗೆ 25.25 ರೂ. ಸಿಗಲಿದೆ. ಹಾಲಿನ ಗುಣಮಟ್ಟಕ್ಕೆ ಅನುಗುಣವಾಗಿ ಮತ್ತಷ್ಟು ಧಾರಣೆ ಸಿಗಲಿದೆ. ಸರಕಾರದ ಪ್ರೋತ್ಸಾಹ ಧನ ಲೀಟರ್ಗೆ 5 ರೂ. ಪ್ರತ್ಯೇಕ ಸಿಗಲಿದೆ.

ಫೆಬ್ರವರಿಯಲ್ಲಿ ಶಿಮುಲ್‍ನಲ್ಲಿ ರಾಜ್ಯದಲ್ಲೇ ಅತಿಹೆಚ್ಚು ಲೀಟರ್‌ಗೆ 29 ರೂ. ಧಾರಣೆ ನೀಡಲಾಗುತ್ತಿತ್ತು. ಆದರೆ, ಕೋವಿಡ್-19 ಬಳಿಕ ಹಾಲಿನ ಮಾರಾಟ ತೀವ್ರ ಕುಸಿದು ಶೇ.50ಕ್ಕಿಂತ ಕಡಿಮೆಯಾಗಿತ್ತು.

ಪ್ರತಿದಿನ ಲಕ್ಷಾಂತರ ಲೀಟರ್ ಹಾಲು ಉಳಿದು ಒಕ್ಕೂಟವು ತೀವ್ರ ಆರ್ಥಿಕ ನಷ್ಟ ಅನುಭವಿಸಿದ್ದವು. ಕಳೆದ ನವೆಂಬರ್‍ನಿಂದ ಹಾಲಿನ ಮಾರಾಟ ಸುಧಾರಣೆ ಕಂಡಿದ್ದು ಆನಂತರದಲ್ಲಿ ಶಿಮುಲ್ ಆರ್ಥಿಕವಾಗಿ ಚೇತರಿಕೆ ಕಂಡಿದೆ.

ಹೀಗಾಗಿ ರೈತರಿಗೆ ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ಹಾಲಿನ ದರವನ್ನು ಏರಿಕೆ ಮಾಡಿದೆ. ರೈತರ ಹಾಲಿನ ದರವನ್ನು ಹೆಚ್ಚಳ ಮಾಡಿದರೂ ಗ್ರಾಹಕರು ಖರೀದಿಸುವ ಹಾಲಿ ದರದಲ್ಲಿ ಯಾವುದೇ ವ್ಯತ್ಯಾಸ ಮಾಡಿಲ್ಲ ಎಂದು ಶಿಮುಲ್ ಅಧ್ಯಕ್ಷ ಡಿ.ಆನಂದ್ ತಿಳಿಸಿದ್ದಾರೆ.

137222609 1043894822757094 322437303418384090 o.jpg? nc cat=111&ccb=2& nc sid=730e14& nc ohc=FXf3xO1XGYIAX854qqz& nc ht=scontent.fblr4 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 12, 2021

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment