ಇವತ್ತು ಶಿಮುಲ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ, ಮೂವರ ನಡುವೆ ಇದೆ ಪೈಪೋಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 26 AUGUST 2024 : ಕುತೂಹಲ ಮೂಡಿಸಿರುವ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ (MILK UNION) ಅಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯಲಿದೆ. ಈಚೆಗೆ ನಡೆದ 14 ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹಿಡಿತ ಸಾಧಿಸಿದೆ.

ಇದನ್ನೂ ಓದಿ ⇒ GOOD MORNING ಶಿವಮೊಗ್ಗ | 26 ಆಗಸ್ಟ್‌ 2024 | ಒಂದೇ ಕ್ಲಿಕ್‌ನಲ್ಲಿ ಜಿಲ್ಲೆಯ ಎಲ್ಲಾ ಸುದ್ದಿ

ಮೂರು ಅವಧಿಗೆ ಅಧಿಕಾರ ಹಂಚಿಕೆ ಕುರಿತು ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಮೊದಲ ಅವಧಿಗೆ ಯಾರು ಅಧ್ಯಕ್ಷರಾಗಬಹುದು ಎಂಬ ಕುತೂಹಲವಿದೆ. ಸದ್ಯ ಶಿಮುಲ್‌ ಮಾಜಿ ಅಧ್ಯಕ್ಷ ವಿದ್ಯಾಧರ, ಶಿಕಾರಿಪುರದ ಟಿ.ಶಿವಶಂಕರಪ್ಪ‌, ಹೊನ್ನಾಳಿ ಬಿ.ಜಿ.ಬಸವರಾಜಪ್ಪ ಅವರು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಹಿರಿಯ ನಿರ್ದೇಶಕರಿಗೆ ಅವಕಾಶ

ಹಿರಿಯ ನಿರ್ದೇಶಕರಿಗೆ ಅವಕಾಶ ನೀಡಬೇಕು ಎಂಬ ಆಗ್ರಹವಿದೆ. ಏಳು ನಿರ್ದೇಶಕರು ಪುನರಾಯ್ಕೆಯಾಗಿದ್ದಾರೆ. ಇವರಿಗೆ ಅಧ್ಯಕ್ಷ, ಉಪಾಧ್ಯ್ಕಷ ಸ್ಥಾನ ನೀಡಬೇಕು ಎಂಬ ವಾದವಿದೆ. ಹಾಗಾಗಿ ಹೊಸದಾಗಿ ಆಯ್ಕೆಯಾದ ಉಳಿದ ಏಳು ನಿರ್ದೇಶಕರು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಗಿಳಿಯುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಇದನ್ನೂ ಓದಿ ⇒ ಅಡಿಕೆ ತೋಟದಲ್ಲಿ ಔಷಧ ಸಿಂಪಡಿಸುವಾಗ ವಿದ್ಯುತ್‌ ಶಾಕ್‌, ಸ್ಥಳದಲ್ಲೇ ವ್ಯಕ್ತಿ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 26, 2024

Leave a Comment