ಶಿವಮೊಗ್ಗದಲ್ಲಿ ಅನಾವರಣಗೊಳ್ಳಲಿದೆ ಛತ್ರಪತಿ ಶಿವಾಜಿ ಪುತ್ಥಳಿ, ಎಲ್ಲಿ? ಯಾವಾಗ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 MARCH 2023

SHIMOGA : ಛತ್ರಪತಿ ಶಿವಾಜಿ ಅವರ 396ನೇ ಜಯಂತಿ ಅಂಗವಾಗಿ ಶಿವಮೊಗ್ಗದ ಲಕ್ಕಿನಕೊಪ್ಪದಲ್ಲಿರುವ ಅಮೂಲ್ಯ ಶೋಧ ವಸ್ತು ಸಂಗ್ರಹಾಲಯದಲ್ಲಿ ಶಿವಾಜಿ ಪುತ್ಥಳಿ (Shivaji Statue) ಅನಾವರಣ ಮಾಡಲಾಗುತ್ತಿದೆ ಎಂದು ಅಮೂಲಕ ಶೋಧ ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಖಂಡೋಬರಾವ್ ಅವರು ತಿಳಿಸಿದರು.

Shivaji-Statue-in-Amulya-Shodha-in-Shimoga

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಂಡೋಬರಾವ್ ಅವರು, ಮಾರ್ಚ್ 24ರಂದು ಬೆಳಗ್ಗೆ 11.45ಕ್ಕೆ ಹಿಂದೂ ರಾಷ್ಟ್ರದ ಸಂರಕ್ಷಕರಾದ ಛತ್ರಪತಿ ಶಿವಾಜಿ ಅವರ ಪುತ್ಥಳಿಯನ್ನು (Shivaji Statue) ಅನಾವರಣ ಮಾಡಲಾಗುತ್ತಿದೆ. ಲಕ್ಕಿನಕೊಪ್ಪದ ಅಮೂಲ್ಯ ಶೋಧ ವಸ್ತು ಸಂಗ್ರಹಾಲಯದಲ್ಲಿ ಬೆಕ್ಕಿನಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಅವರು ಪುತ್ಥಳಿ ಅನಾವರಣ  ಮಾಡಲಿದ್ದಾರೆ ಎಂದರು.

ಪುತ್ಥಳಿಯನ್ನು ದಾನವಾಗಿ ನೀಡಿದ ಬಾಗಲಕೋಟೆಯ ಮಾರುತಿರಾವ್ ಶಿಂಧೆ ಅವರು ಉಪಸ್ಥಿತರಿರಲಿದ್ದಾರೆ. ಮರಾಠ ಅಭಿವೃದ್ಧಿ ನಿಗಮದ ಮಾರುತಿರಾವ್ ಗಣಪತಿರಾವ್ ಶಿಂಧೆ ಅವರು ಶ್ರೀ ಸಾಯಿ ಶಿವಸದನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಖಂಡೋಬರಾವ್ ಅವರು ತಿಳಿಸಿದರು.

Nammur-News-Whatsapp

ನಾಲ್ಕು ತಲೆಮಾರಿನ ಹಿಂದೆ ಮಗರ್ ಕುಟುಂಬದವರು ಕರ್ನಾಟಕಕ್ಕೆ ಬಂದು ನೆಲೆಸಿದ್ದರ ಕುರಿತು ಬರೆದಿರುವ ಮಗರ್ ವಾಹಿನಿ ಪುಸ್ತಕವನ್ನು ಅಂದು ಬಿಡುಗಡೆ ಮಾಡಲಾಗುತ್ತದೆ. ಕೆಕೆಎಂಪಿ ರಾಜ್ಯಾಧ್ಯಕ್ಷ ಸುರೇಶ್ ರಾವ್ ಸಾಠೆ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.

ಪ್ರಮುಖರಾದ ರಂಜಿತ್ ಮಗರ್, ರಮೇಶ್ ಬಾಬು ಜಾಧವ್, ಟಿ.ಆರ್.ಅಶ್ವಥನಾರಾಯಣ,  ಎಸ್.ಬಿ.ಅಶೋಕ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿಗೆ ಗೋ ಮೂತ್ರ ಸಿಂಪಡಿಸಿದ ಹಿಂದೂ ಕಾರ್ಯಕರ್ತರು, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 21, 2023

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment