ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | 28 ನವೆಂಬರ್ 2018
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯಲಿದೆ. ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ್ ಚುನಾವಣೆ ನಡೆಸಲಿದ್ದಾರೆ.
ಯಾರು ಗೊತ್ತಾ ಮೇಯರ್?
ಮೇಯರ್ ಸ್ಥಾನ ಎಸ್ಸಿ ಮಹಿಳೆಗೆ ಮೀಸಲಾಗಿದೆ. ಹಾಗಾಗಿ ಬಿಜೆಪಿಯಿಂದ ಗೆಲುವು ಸಾಧಿಸಿರುವ ಲತಾ ಗಣೇಶ್ ಅವರು ಮೇಯರ್ ಆಗಲಿದ್ದಾರೆ. ಆಟೋ ಚಾಲಕ ಗಣೇಶ್ ಅವರ ಪತ್ನಿ ಲತಾ ಅವರು ಮೇಯರ್ ಸ್ಥನಕ್ಕೇರುತ್ತಿದ್ದಾರೆ.
ಉಪಮೇಯರ್ ಹುದ್ದೆ ಯಾರಿಗೆ?
ಶಿವಮೊಗ್ಗ ಪಾಲಿಕೆಯ ಉಪಮೇಯರ್ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಹಾಗಾಗಿ ಎಸ್.ಎನ್.ಚನ್ನಬಸಪ್ಪ ಅವರು ಉಪಮೇಯರ್ ಆಗಿ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ. ಇನ್ನು, ಇವತ್ತೇ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆದು, ಅಧ್ಯಕ್ಷರು ಆಯ್ಕೆಯಾಗಲಿದ್ದಾರೆ.
ಹೇಗಿರುತ್ತೆ ಆಯ್ಕೆ ಪ್ರಕ್ರಿಯೆ?
ಬೆಳಗ್ಗೆ 11.30ಕ್ಕೆ ಪಾಲಿಕೆ ಸಭಾಂಗಣದಲ್ಲಿ ನೂತನ ಸದಸ್ಯರು ಹಾಜರಾತಿ ಹಾಕುತ್ತಾರೆ. ಬಳಿಕ ಎಲ್ಲ ಸದಸ್ಯರಿಗು ಪ್ರಮಾಣವಚನ ಬೋಧಿಸಲಾಗುತ್ತದೆ. ನಂತರ ಮೇಯರ್ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ, ಅರ್ಜಿ ಹಿಂಪಡೆಯಲು ಅವಕಾಶ, ಅಗತ್ಯ ಬಿದ್ದರೆ ಚುನಾವಣೆ ನಡೆಯಲಿದೆ. ಇದೇ ರೀತಿ ಉಪ ಮೇಯರ್ ಚುನಾವಣೆ ನಡೆಯಲಿದೆ. ಮೇಯರ್, ಉಪ ಮೇಯರ್ ಆಯ್ಕೆ ಬಳಿಕ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷ, ಸದಸ್ಯರ ಆಯ್ಕೆ ನಡೆಯಲಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494