ಮೊಬೈಲ್‌ ಕ್ಯಾಂಟೀನ್‌ ಯೋಜನೆ, ಅರ್ಜಿ ಆಹ್ವಾನಿಸಿದ ಪ್ರವಾಸೋದ್ಯಮ ಇಲಾಖೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಉತ್ತಮ ಸೌಲಭ್ಯ ಒದಗಿಸುವ ಹಾಗೂ ಸಣ್ಣ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಪ್ರವಾಸೋದ್ಯಮ ಇಲಾಖೆಯು 2025-26ನೇ ಸಾಲಿಗೆ ಮೊಬೈಲ್ ಕ್ಯಾಂಟೀನ್ (mobile canteen) ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಜಿಲ್ಲೆಯ ನಿವಾಸಿಗಳಾದ ಪರಿಶಿಷ್ಟ ಜಾತಿಗೆ ಸೇರಿದ 6 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 4 ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ ನೀಡಲಾಗುತ್ತಿದೆ. ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 20 ರಿಂದ 55 ವರ್ಷದೊಳಗಿನವರಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು. ಲಘು ವಾಹನ ಚಾಲನಾ ಪರವಾನಗಿ, ಆಧಾರ್ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ವಾಸಸ್ಥಳ ದೃಢೀಕರಣ ಪತ್ರ ಹೊಂದಿರಬೇಕು. ಬ್ಯಾಂಕ್‌ನಿಂದ ಸಾಲ ಪಡೆಯಲು ಅರ್ಹತೆ ಇರುವ ಬಗ್ಗೆ ದೃಢೀಕರಣ ಪತ್ರ ಮತ್ತು ಇಲಾಖೆ ನೀಡುವ ಕೌಶಲ್ಯಾಭಿವೃದ್ಧಿ ತರಬೇತಿ ಕಡ್ಡಾಯವಾಗಿ ಪಡೆಯುವ ಬಗ್ಗೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ. ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ ಮಂಡಳಿಗಳಲ್ಲಿ ಕೆಲಸ ಮಾಡುತ್ತಿರಬಾರದು.

ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 13ರೊಳಗಾಗಿ ಸಲ್ಲಿಸಬೇಕು. ಅರ್ಜಿ ನಮೂನೆಗಾಗಿ ಗೋಪಾಲಗೌಡ ಬಡಾವಣೆಯ ‘ಎ’ ಬ್ಲಾಕ್‌ನಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರಾದ ಪ್ರಭುಲಿಂಗ ಕವಳಿಕಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು 08182-251444 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಳೆ, ತಂಪಾದ ಇಳೆ, ಎಲ್ಲೆಲ್ಲಿ ಮಳೆಯಾಗಿದೆ? ಇಲ್ಲಿದೆ ಡಿಟೇಲ್ಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment