ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 MARCH 2024
SHIMOGA : ಲೋಕಸಭೆ ಚುನಾವಣೆಗೆ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸುವ ಕುರಿತು ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಮಧು ಬಂಗಾರಪ್ಪ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖ ಸಂಗತಿಗಳ ಕುರಿತು ಮಾತನಾಡಿದರು.
3 ಪ್ರಮುಖ ಪಾಯಿಂಟ್
ಪತ್ನಿ ಗೀತಾ ಶಾಸಕಿ, ಸಂಸದೆಯಾಗಿ ಆಯ್ಕೆಯಾಗಬೇಕು ಎಂಬ ಆಸೆ ಎಲ್ಲರಂತೆ ಪತಿಯಾಗಿ ನನಗೂ ಇದೆ. ಗೀತಾ ಶಿವರಾಜ್‌ಕುಮಾರ್ ಈಗಾಗಲೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಶಾಸಕಿ ಅಥವಾ ಸಂಸದೆಯಾಗಿ ಆಯ್ಕೆಯಾದರೆ ಮಹಿಳೆಯರಿಗೊಂದು ಸ್ಫೂರ್ತಿ ದೊರೆಯಲಿದೆ. ಇದಕ್ಕಾಗಿಯೇ ಅವರು ಜನಪ್ರತಿನಿಧಿ ಆಗಬೇಕು ಎಂಬ ಆಸೆ ಇದೆ.
ಗೀತಾ ಶಿವರಾಜ್‌ಕುಮಾರ್ ಅವರನ್ನು ಒಬ್ಬ ಸೆಲೆಬ್ರಿಟಿ ಆಗಿ ನೋಡುವ ಅಗತ್ಯ ಇಲ್ಲ. ಸಮಾಜ ಸೇವೆಯಲ್ಲಿ ಎಲ್ಲರ ಜೊತೆಗೆ ಬೆರೆಯುತ್ತಿದ್ದಾರೆ. ಆಕೆ ರಾಜಕೀಯ ಕುಟುಂಬದಿಂದ ಬಂದಿರುವುದರಿಂದ ಸಹಜವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಆಶಯ ಹೊಂದಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಚಿವ ಮಧು ಜನ್ಮದಿನ, ‘ಸ್ಪೆಷಲ್ ಕೇಕ್‌ನ ಸೀಕ್ರೆಟ್’ ಬಹಿರಂಗಪಡಿಸಿದ ನಟ ಶಿವರಾಜ್ ಕುಮಾರ್
ಪಕ್ಷದ ಹೈಕಮಾಂಡ್ ಅವಕಾಶ ನೀಡಿದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ. ಇಲ್ಲವಾದರೆ ಬೇಸರವಿಲ್ಲ. ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ. ಚುನಾವಣೆಯಲ್ಲಿ ಸ್ಪರ್ಧಿಸಿದರೆ ನನ್ನ ಬೆಂಬಲ ಇರುತ್ತದೆ. ಪ್ರಚಾರಕ್ಕೂ ಬರುತ್ತೇನೆ. ಸಿನಿಮಾ ಚಿತ್ರೀಕರಣದ ದಿನಗಳನ್ನು ನೋಡಿಕೊಂಡು ಪ್ರಚಾರ ನಡೆಸುತ್ತೇನೆ. ನಾನು ಸಿನಿಮಾರಂಗದಲ್ಲಿ ಇರುವುದರಿಂದ ರಾಜಕೀಯಕ್ಕೆ ಬರುವ ಯಾವುದೇ ಉದ್ದೇಶ ಹೊಂದಿಲ್ಲ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






