ಶಿವಮೊಗ್ಗ ಏರ್‌ಪೋರ್ಟ್‌ ಬಳಿ ಶಾಪಿಂಗ್‌ ಮಾಲ್‌, ಹೊಟೇಲ್‌, KSIIDC ಅಧ್ಯಕ್ಷರು ಏನೆಲ್ಲ ಹೇಳಿದರು? ಇಲ್ಲಿದೆ ಹೈಲೈಟ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ವಿಮಾನ ನಿಲ್ದಾಣಕ್ಕೆ (Airport) ಬಳಕೆಯಾಗಿ ಉಳಿದಿರುವ 111 ಎಕರೆ ಪ್ರದೇಶದಲ್ಲಿ ಶಾಪಿಂಗ್‌ ಮಾಲ್‌, ಹೊಟೇಲ್‌ ನಿರ್ಮಿಸುವ ಯೋಚನೆ ಇದೆ ಎಂದು ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್‌.ಜಿ.ನಂಜಯ್ಯನಮಠ ತಿಳಿಸಿದರು.

ಮಲ್ನಾಡ್‌ ಶೈರ್‌ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಜಿ.ನಂಜಯ್ಯನಮಠ, ಶಿವಮೊಗ್ಗ ವಿಮಾನ ನಿಲ್ದಾಣದ ಬಳಕೆಗೆ 780 ಎಕರೆ ಜಾಗವಿದೆ. ಉಳಿಕೆ 111 ಎಕರೆ ಜಾಗವನ್ನು ಲೀಸ್‌ಗೆ ನೀಡುವ ಯೋಚನೆ ಇದೆ. ಅಲ್ಲಿ ಶಾಪಿಂಗ್‌ ಮಾಲ್‌ ಅಥವಾ ಹೊಟೇಲ್‌ ಸೇರಿ ಸಾರ್ವಜನಿಕ ಬಳಕೆಗೆ ಉಪಯೋಗಿಸಲಾಗುತ್ತದೆ ಎಂದು ತಿಳಿಸಿದರು.

[su_note note_color=”#f1f1f1″ text_color=”#000000″ radius=”0″]

ನಂಜಯ್ಯನ ಮಠ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್‌

Point 1 F1F1F1ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕೆಎಸ್‌ಐಐಡಿಸಿ ವತಿಯಿಂದ ನಿರ್ವಹಣೆ ಮಾಡಲಾಗುತ್ತಿದೆ. ಈಗಾಗಲೆ ಈ ವಿಮಾನ ನಿಲ್ದಾಣದಿಂದ ಹೈದರಾಬಾದ್‌, ಗೋವಾ, ತಿರುಪತಿ, ಬೆಂಗಳೂರು, ಚೆನ್ನೈಗೆ ವಿಮಾನಯಾನ ಸೇವೆ ಒದಗಿಸಲಾಗುತ್ತಿದೆ.

[su_divider top=”no” divider_color=”#b8b8b8″ link_color=”#000000″ margin=”10″]

Point 2 F1F1F1ವಿಮಾನ ನಿಲ್ದಾಣಕ್ಕೆ ನಿಗದಿಯಾಗಿರುವ ಜಾಗ ಹೊರತು 111 ಎಕರೆ ಹೆಚ್ಚುವರಿ ಜಾಗ ಲಭ್ಯವಿದೆ. ಇಲ್ಲಿ ಹೊಟೇಲ್‌, ಮಾಲ್‌ ನಿರ್ಮಾಣ ಸಂಬಂಧ ಕೆಎಸ್‌ಐಐಡಿಸಿ ಮುಂದಿನ ಸಭೆಯಲ್ಲಿ ಚರ್ಚಿಸಲಾಗುತ್ತದೆ.

[su_divider top=”no” divider_color=”#b8b8b8″ link_color=”#000000″ margin=”10″]

Point 3 F1F1F1ಶಿವಮೊಗ್ಗ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಮೊದಲ ವರ್ಷ 17 ಸಾವಿರ ಮಂದಿ ಪ್ರಯಾಣಿಸಿದ್ದರು. ಎರಡೆನೆ ವರ್ಷ 92 ಸಾವಿರ, ಮೂರನೆ ವರ್ಷ 1 ಲಕ್ಷಕ್ಕೂ ಹೆಚ್ಚು ಮಂದಿ ಇಲ್ಲಿಂದ ಪ್ರಯಾಣ ಮಾಡಿದ್ದಾರೆ.

[su_divider top=”no” divider_color=”#b8b8b8″ link_color=”#000000″ margin=”10″]

Point 4 F1F1F1ರಾತ್ರಿ ವೇಳೆ ಲ್ಯಾಂಡಿಂಗ್‌ ವ್ಯವಸ್ಥೆಯಾದರೆ ಮತ್ತಷ್ಟು ಸ್ಥಳಗಳಿಗೆ ಇಲ್ಲಿಂದ ವಿಮಾನಯಾನ ಸೇವೆ ಆರಂಭಿಸಬಹುದು. ನೈಟ್‌ ಲ್ಯಾಂಡಿಂಗ್‌ ಸೇವೆಯನ್ನು ಶೀಘ್ರ ಪೂರ್ಣಗೊಳಿಸುತ್ತೇವೆ. ನ್ಯಾವಿಗೇಷನ್‌ ಉಪಕರಣಗಳು ಬಂದಿವೆ. ಅವುಗಳ ಅಳವಡಿಕೆಗೆ ಸಿವಿಲ್‌ ಟೆಂಡರ್‌ ಕರೆಯಲಾಗಿದ್ದು, ಶೀಘ್ರ ಕಾಮಗಾರಿ ನಡೆಯಲಿದೆ.

[su_divider top=”no” divider_color=”#b8b8b8″ link_color=”#000000″ margin=”10″]

Point 5 F1F1F1ವಿಮಾನ ನಿಲ್ದಾಣಕ್ಕೆ ಜಾಗ ನೀಡಿದ ರೈತರಿಗೆ ನಿವೇಶನ ಹಂಚಿಕೆ ಕುರಿತು ಸರ್ಕಾರದ ಜೊತೆಗೆ ಚರ್ಚಿಸುತ್ತೇನೆ. ಕೆಎಸ್‌ಐಐಡಿಸಿ ಅಧ್ಯಕ್ಷನಾಗಿ ಎರಡು ದಿನವಾಗಿದೆ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ.[/su_note]

ಯಡಿಯೂರಪ್ಪ ಶ್ರಮದಿಂದ ಏರ್‌ಪೋರ್ಟ್‌

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಾಗಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶ್ರಮವಿದೆ. ಈ ಭಾಗದ ವಿಮಾನಯಾನಕ್ಕೆ ಅಡಿಗಲ್ಲು ಹಾಕಿದ್ದು ಯಡಿಯೂರಪ್ಪ. ಅವರ ಶ್ರಮವನ್ನು ಪಕ್ಷಾತೀತವಾಗಿ ಸ್ಮರಿಸಬೇಕು ಎಂದು ಎಸ್‌.ಜಿ.ನಂಜಯ್ಯನಮಠ ತಿಳಿಸಿದರು.

KSIIDC-President-Nanjayanamata-speaks-about-shimoga-airport

ಸುದ್ದಿಗೋಷ್ಠಿಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ದೇಶಕ ಶಮಂತ್‌, ವಿಮಾನ ನಿಲ್ದಾಣದ ಹಿರಿಯ ಅಧಿಕಾರಿ ವಿದ್ಯಾಧರ ಸಾಲಿಮಠ, ಕೆಎಸ್‌ಐಎಸ್‌ಎಫ್‌ ಡಿವೈಎಸ್‌ಪಿ ಚಂದ್ರಶೇಖರ್‌ ಸೇರಿದಂತೆ ಹಲವರು ಇದ್ದರು.

A1

Airport

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 8, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment