ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 NOVEMBER 2023
SHIMOGA : ಜಿಲ್ಲಾ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಡಿಸೆಂಬರ್ 6 ರಿಂದ 10 ರವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸ್ವದೇಶಿ ಮೇಳ (Swadesi Mela) ಆಯೋಜನೆಗೊಂಡಿದೆ. ಈಗಾಗಲೇ ಮಳಿಗೆ ಹಾಕಲು ಬುಕ್ಕಿಂಗ್ ಆರಂಭಗೊಂಡಿದೆ.
ಜನರಿಗೆ ಸ್ವದೇಶಿ ವಸ್ತುಗಳ ಪರಿಚಯ ಮಾಡಿಸುವುದರ ಜೊತೆಗೆ ದೇಶೀಯ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ 250ಕ್ಕೂ ಹೆಚ್ಚು ಮಳಿಗೆಗಳು ಭಾಗವಹಿಸಲಿವೆ. 1 ಲಕ್ಷಕ್ಕೂ ಹೆಚ್ಚು ವಿವಿಧ ವರ್ತಕರು, ಉದ್ಯಮಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ವಿವಿಧ ರೀತಿಯ ತರಬೇತಿಗಳು, ದೇಶೀಯ ಕ್ರೀಡೆಗಳು ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಈ ಮೇಳದಲ್ಲಿ ಕೇಂದ್ರದ ಮಂತ್ರಿಗಳು, ರಾಜ್ಯದ ಪ್ರಮುಖ ಸ್ವಾಮೀಜಿಗಳು ಹಾಗೂ ರಾಜ್ಯದ ಮತ್ತು ಜಿಲ್ಲೆಯ ಪ್ರಮುಖ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮೇಳದಲ್ಲಿ ಮಳಿಗೆ ಹಾಕಲು ಆಸಕ್ತರು ಈ ಕೆಳಗಿನ ದೂರವಾಣಿ (ಅರವಿಂದ-9148524854)ಯನ್ನು ಸಂಪರ್ಕಿಸಲು ಕೋರುವಂತೆ ಸ್ವದೇಶಿ ಮೇಳದ ಸಂಯೋಜಕರಾದ ಡಾ ಧನಂಜಯ ಸರ್ಜಿ, ಸಂಚಾಲಕರಾದ ಡಿ. ಎಸ್. ಅರುಣ್ ಹಾಗೂ ಸಂಘಟಕರಾದ ಹರ್ಷ ಬಿ. ಕಾಮತ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ವಾಟ್ಸಪ್‌ನಲ್ಲಿ ಡೇಟ್ ವೈರಲ್, ದೇಗುಲ ಸಮಿತಿ ಹೇಳಿದ್ದೆ ಬೇರೆ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















