ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022
ಹಿಜಾಬ್, ಕೇಸರಿ ಶಾಲು ಸಂಘರ್ಷ ಶಿವಮೊಗ್ಗದ ವ್ಯಾಪಾರಿಗಳಿಗೆ ಬರೆ ಎಳೆದಿದೆ. ನಿಷೇಧಾಜ್ಞೆ ಜಾರಿಗೊಳಿಸಿದ ಬೆನ್ನಿಗೆ ನಗರದ ಬಹುತೇಕ ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಗಿದೆ. ಈಗಾಗಲೇ ಲಾಕ್ ಡೌನ್’ನಿಂದಾಗಿ ಕಂಗೆಟ್ಟಿದ್ದ ವ್ಯಾಪಾರಿಗಳು, ಈ ವಿವಾದದಿಂದಾಗಿ ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದಾರೆ.
ಶಿವಮೊಗ್ಗ ನಗರದಲ್ಲಿ ಫೆಬ್ರವರಿ 8 ಮತ್ತು 9ರಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜನ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಈ ನಡುವೆ ಇವತ್ತು ಬಹುತೇಕ ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಯಿತು.
ಮಧ್ಯಾಹ್ನದ ವೇಳೆಗೆ ಎಲ್ಲವೂ ಬಂದ್
ವಿದ್ಯಾರ್ಥಿಗಳು ಗುಂಪುಗೂಡಿ ಹೋರಾಟ ನಡೆಸಿದರು. ಇದರಿಂದ ಸೈನ್ಸ್ ಮೈದಾನ ಮುಂಭಾಗ ಕೆಲವು ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡಬೇಕಾಯಿತು. ಈ ಬೆಳವಣಿಗೆ ಬೆನ್ನಿಗೆ ಶಿವಮೊಗ್ಗದಲ್ಲಿ ಎರಡು ದಿನ ನಿಷೇಧಾಜ್ಞೆ ಘೋಷಿಸಲಾಯಿತು. ಆ ನಂತರ ಶಿವಮೊಗ್ಗದಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಯಿತು.
ಇದನ್ನೂ ಓದಿ | ರಾಜ್ಯಾದ್ಯಂತ ಮೂರು ದಿನ ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ
ಮುನ್ನೆಚ್ಚರಿಕಾ ಕ್ರಮವಾಗಿ ಬಿ.ಹೆಚ್.ರಸ್ತೆ, ಗಾಂಧಿ ಬಜಾರ್, ನೆಹರೂ ರೋಡ್, ದುರ್ಗಿಗುಡಿ ಸೇರಿದಂತೆ ನಗರದ ಬಹುಭಾಗದಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಲಾಯಿತು. ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ಮೈಕ್ ಮೂಲಕ ಅನೌನ್ಸ್ ಮಾಡಿದರು. ಅಲ್ಲದೆ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಿದರು.
ಲಾಕ್ ಡೌನ್ ಬಳಿಕ ಮತ್ತೊಂದು ಪೆಟ್ಟ
ಕರೋನ ಲಾಕ್ ಡೌನ್’ನಿಂದಾಗಿ ಶಿವಮೊಗ್ಗದ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದರು. ಈಗ ಹಿಜಾಬ್, ಕೇಸರಿ ಶಾಲು ವಿವಾದದಿಂದಾಗಿ ಮತ್ತೆ ವ್ಯಾಪಾರಿಗಳಿಗೆ ಸಮಸ್ಯೆ ಎದುರಾಗಿದೆ. ವಾರದ ಆರಂಭದ ವ್ಯಾಪಾರಕ್ಕೆ ಪೆಟ್ಟು ಬಿದ್ದಂತಾಗಿದೆ. ಇದರಿಂದು ಸುಧಾರಿಸಿಕೊಳ್ಳುವುದಕ್ಕೆ ವ್ಯಾಪಾರಿಗಳಿಗೆ ಮತ್ತಷ್ಟು ಸಮಯ ಬೇಕಾಗುತ್ತದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ತಾರಕಕ್ಕೆ, ಕಲ್ಲು ತೂರಾಟ, ಹಲವರ ಬಂಧನ
Shimoga District Profile | Shivamogga Live WhatsApp Number 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422