ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | PROTEST| 10 ಮೇ 2022
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಇವತ್ತು ಶಿವಮೊಗ್ಗ ತಲುಪಿತು. ಐದು ದಿನ ನಿರಂತರ ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜನಧ್ವನಿ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಮ್ಮನೆ ರತ್ನಾಕರ್ ಅವರಿಗೆ ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದ್ದಾರೆ.
ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ, ಪಿಎಸ್ಐ ನೇಮಕಾತಿ ಹಗರಣ, ಗೃಹ ಸಚಿವರ ಅಸಮರ್ಥತೆ ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಯಿತು.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರೂರು ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದಿಂದ ಆರಂಭವಾಗಿದ್ದ ಪಾದಯಾತ್ರೆ ಇವತ್ತು ಶಿವಮೊಗ್ಗ ತಲುಪಿತು. ದೊಡ್ಡ ಸಂಖ್ಯೆಯ ಕಾರ್ಯಕರ್ತರೊಂದಿಗೆ ಕಿಮ್ಮನೆ ರತ್ನಾಕರ್ ಅವರು ಶಿವಮೊಗ್ಗಕ್ಕೆ ಆಗಮಿಸಿದರು.
ಜನಧ್ವನಿ ಹೋರಾಟದಲ್ಲಿ ಭಾಗಿ
ಪಾದಯಾತ್ರೆ ಮೂಲಕ ಆಗಮಿಸಿದ ಕಾರ್ಯಕರ್ತರು, ಜನಧ್ವನಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಇವತ್ತು ಅರಕೆರೆಯಿಂದ ಹೊರಟ ಪಾದಯಾತ್ರೆ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಜನಧ್ವನಿ ಪ್ರತಿಭಟನಾ ಮೆರವಣಿಗೆ ಸೇರಿತು.
ಹೆಗಲ ಮೇಲೆ ಹೊತ್ತು ಘೋಷಣೆ
ಇತ್ತ ಜನಧ್ವನಿ ಪ್ರತಿಭಟನಾ ಮೆರವಣಿಗೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಿಮ್ಮನೆ ರತ್ನಾಕರ್ ಅವರ ಪರವಾಗಿ ಘೋಷಣೆ ಕೂಗಿದರು. ಕಿಮ್ಮನೆ ರತ್ನಾಕರ್ ಅವರನ್ನು ಹೆಗಲ ಮೇಲೆ ಹೊತ್ತು ಮೆರವಣಿಗೆಯಲ್ಲಿ ಸಾಗಿದರು.
ಸಿದ್ದರಾಮಯ್ಯ ಫೋನ್ ಕರೆ
ಇತ್ತ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ಮಾಡಿದ್ದಾರೆ. ಪಾದಯಾತ್ರೆ ಮಾಡಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು, ರಾಹುಲ್ ಗಾಂಧಿ ಅವರು ಕೂಡ ಕಿಮ್ಮನೆ ರತ್ನಾಕರ್ ಅವರ ಪಾದಯಾತ್ರೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂತಹ ಹೋರಾಟ, ಪಾದಯಾತ್ರೆಗಳು ಪ್ರತಿ ಕ್ಷೇತ್ರದಲ್ಲಿಯು ಆಗಬೇಕು ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ | “ಬಿಜೆಪಿಗೂ ಕೇಸರಿಗೂ ಏನು ಸಂಬಂಧ? ಇನ್ಮುಂದೆ ಕೆಂಪು ಶಾಲು, ಟೋಪಿ ಹಾಕಲಿ”