ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಆಗಸ್ಟ್ 2020
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 4 ರಂದು ಶಿವಮೊಗ್ಗ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಕೂಡ ಇರುತ್ತಾರೆ. ಇವರ ಜೊತೆಗೆ ಜಿಲ್ಲೆಯ ಕಾಂಗ್ರೆಸ್ ನಾಯಕರು ಇರಲಿದ್ದು, ಲಗಾನ್ ಕಲ್ಯಾಣ ಮಂದಿರದಲ್ಲಿ ಮುಖಂಡರ ಸಭೆ ನಡೆಯಲಿದ್ದು, ಯಾವುದೇ ಬಹಿರಂಗ ಸಭೆ ಇರುವುದಿಲ್ಲ ಎಂದರು.
ಕರೋನ ನಿಯಂತ್ರಣದಲ್ಲಿ ಸರ್ಕಾರ ವಿಫಲ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕರೋನಾ ಕಾಯಿಲೆ ತಡೆಯಲು ಸಂಪೂರ್ಣ ವಿಫಲವಾಗಿವೆ. ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೋನಾ ಸೋಂಕನ್ನು ಹರಡುವುದನ್ನು ನಿಯಂತ್ರಿಸುತ್ತಿಲ್ಲ. ಅದರ ಬದಲು ಜನರ ಗಮನವನ್ನು ಬೇರೆ ಕಡೆಗೆ ಸೆಳೆಯುತ್ತ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕರೋನಾದ ಸಂದರ್ಭದಲ್ಲಿಯೇ ಸುಗ್ರಿವಾಜ್ಞೆಗಳ ಮೂಲಕ ಜನ ವಿರೋಧಿ ಕಾಯ್ದೆಗಳನ್ನು ಜಾರಿ ತರಲಾಗುತ್ತಿದೆ. ವಲಸೆ ಕಾರ್ಮಿಕರ ಕುರಿತಾಗಿ ಯಾವ ಕ್ರಮವನ್ನು ತೆಗೆದುಕೊಂಡಿಲ್ಲ. ಇಡೀ ದೇಶದ ಆರ್ಥಿಕ ವ್ಯವಸ್ಥೆಯೇ ಕುಸಿದು ಬಿದ್ದಿದೆ. ಈ ಎಲ್ಲಾ ವಿಷಯಗಳನ್ನು ಕಾಂಗ್ರೆಸ್ ಚರ್ಚಿಸುತ್ತದೆ ಎಂದರು.
ಉಪಕರಣ ಖರೀದಿಯಲ್ಲಿ ಹಗರಣ
ಪ್ರಮುಖವಾಗಿ ಕರೋನಾ ಉಪಕರಣಗಳ ಖರೀದಿಯಲ್ಲಿ ಕೋಟ್ಯಾಂತರ ರೂ. ಹಗರಣವಾಗಿದೆ. ಈ ವಿಷಯವನ್ನು ಕೂಡ ಚರ್ಚಿಸಲಾಗುವುದು. ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಮೆಗ್ಗಾನ್ ಆಸ್ಪತ್ರೆಯ ದೋಷಗಳ ವಿರುದ್ಧ ಮತ್ತಷ್ಟು ಹೋರಾಟ ರೂಪಿಸಲಾಗುವುದು. ಅಲ್ಲಿ ಕರೋನಾ ರೋಗಿಗಳನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಕಾಂಗ್ರೆಸ್ ತನ್ನ ಹೋರಾಟ ಆರಂಭಿಸಿದ್ದು, ಮತ್ತಷ್ಟು ವಿಸ್ತರಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೀಶ್, ಚಂದ್ರಭೂಪಾಲ್, ವಿಶ್ವನಾಥ್ ಕಾಶಿ, ಯಮುನಾ ರಂಗೇಗೌಡ, ನಾಗರಾಜ್, ಆರ್.ಸಿ.ನಾಯಕ್, ದೀಪಕ್‍ಸಿಂಗ್, ಮಧು ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200