ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2020
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆ ಶಿವಮೊಗ್ಗ ಪ್ರವಾಸ ರದ್ದಾಗಿದೆ. ಇವತ್ತು ಸಿದ್ದರಾಮಯ್ಯ ಅವರು ಶಿವಮೊಗ್ಗಕ್ಕೆ ಭೇಟಿ ನೀಡುವವರಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕರೋನ ಪರೀಕ್ಷೆ ಮಾಡಿಸಿದ್ದರು. ರಾತ್ರಿ ವೇಳೆ ಕರೋನ ಪಾಸಿಟಿವ್ ಬಂದಿದ್ದು ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ನಡೆಯುತ್ತಿದೆ.
ಸಿದ್ದರಾಮಯ್ಯ ಅವರು ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಬೇಕಿತ್ತು. ಗಾಡಿಕೊಪ್ಪದ ಲಗಾನ್ ಕಲ್ಯಾಣ ಮಂದಿರದಲ್ಲಿ ಪಕ್ಷ ಸಂಘಟನೆ ಸಂಬಂಧ ಜಿಲ್ಲೆಯ ಪ್ರಮುಖ ಮುಖಂಡರ ಜೊತೆಗೆ ಸಭೆ ನಡೆಸಬೇಕಿತ್ತು. ಪತ್ರಿಕಾಗೋಷ್ಠಿಯನ್ನೂ ಆಯೋಜಿಸಲಾಗಿತ್ತು.
ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್ ಅವರಿಗೆ ಕರೋನ ಪಾಸಿಟಿವ್ ಬಂದ ಹಿನ್ನಲೆ ಮತ್ತು ತಮ್ಮ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಸಿದ್ದರಾಮಯ್ಯ ಅವರ ಪ್ರವಾಸ ರದ್ದಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]