ಶಿವಮೊಗ್ಗ: ಸಿಗಂದೂರಿಗೆ ಸಂಪರ್ಕ ಕಲ್ಪಿಸುತ್ತಿದ್ದ ಲಾಂಚ್ಗಳನ್ನು (Launch) ಇನ್ಮುಂದೆ ಹೊಟೇಲ್ ಆಗಿ ಪರಿವರ್ತಿಸುವ ಯೋಜನೆ ಇದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಇನ್ಮುಂದೆ KSRTC ಬಸ್ಸುಗಳಲ್ಲಿ ಯದ್ವತದ್ವ ಲಗೇಜ್ ಕೊಂಡೊಯ್ಯುವಂತಿಲ್ಲ, ಜಾರಿಗೆ ಬಂದಿದೆ ಲಗೇಜ್ ನೀತಿ
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಉದ್ಘಾಟನೆಯಾಗಿದೆ. ಹಾಗಾಗಿ ಇಲ್ಲಿನ ಎರಡು ಲಾಂಚ್ಗಳಲ್ಲಿ ಹೊಟೇಲ್ ನಿರ್ಮಿಸುವ ಯೋಜನೆ ಇದೆ. ಬೋಟ್ಗಳಲ್ಲಿ ಲಾಂಚ್ ಬಳಿಗೆ ಜನರನ್ನು ಕರೆದೊಯ್ದು ಊಟ, ತಿಂಡಿಗೆ ವ್ಯವಸ್ಥೆ ಮಾಡುವ ಯೋಚನೆ ಇದೆ. ಒಂದು ಲಾಂಚ್ನಲ್ಲಿ ಸಸ್ಯಾಹಾರ, ಮತ್ತೊಂದರಲ್ಲಿ ಮಾಂಸಾಹಾರಕ್ಕೆ ವ್ಯವಸ್ಥೆ ಮಾಡುವ ಚಿಂತನೆ ಇದೆ ಎಂದರು.

ಈ ಕುರಿತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ.ಪಾಟೀಲ್ ಅವರ ಜೊತೆಗೆ ಮಾತನಾಡಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದಕ್ಕೆ ಹಣಕಾಸು ನೆರವು ಒದಗಿಸುವುದಾಗಿ ತಿಳಿಸಿದ್ದಾರೆ. ಈ ಭಾಗದ ಯಾವುದಾದರೂ ನಡುಗಡ್ಡೆಯಲ್ಲಿ ಅವಕಾಶ ಕಲ್ಪಿಸಿದರೆ ಅಲ್ಲಿಯು ಜನ ಕುಳಿತು ಸಮಯ ಕಳೆಯಲು ಅವಕಾಶ ಕಲ್ಪಿಸಲಾಗುತ್ತದೆ. ಇನ್ನು ಇಲ್ಲಿ ಮದ್ಯ ಸೇವನೆಗೆ ಅವಕಾಶ ಇರುವುದಿಲ್ಲ ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದರು.
ಜೋಗ ಸೇರಿದಂತೆ ಸುತ್ತಮುತ್ತಲು ಪ್ರವಾಸಕ್ಕೆ ಬಂದವರು ಇಲ್ಲಿಗೆ ಭೇಟಿ ನೀಡಬಹುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಪ್ರಮುಖರಾದ ಶಿ.ಜು.ಪಾಷಾ ಇದ್ದರು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






