ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸಿಗಂದೂರು ಚೌಡೇಶ್ವರಿ ದೇವಸ್ಥಾನದ ನಿರ್ವಹಣೆಗೆ ಸರ್ಕಾರ ರಚಿಸಿರುವ ಸಮಿತಿಯ ಮೊದಲ ಸಭೆ ನಡೆದ ಬೆನ್ನಿಗೆ, ಧರ್ಮದರ್ಶಿ ರಾಮಪ್ಪ ಮೌನ ಮರಿದಿದ್ದಾರೆ. ಸಮಿತಿ ವಿಚಾರವಾಗಿ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗದ ಈಡಿಗ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಅವರು, ಸಮಿತಿಯನ್ನು ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ಈಡಿಗ ಸಮುದಾಯ ಪ್ರತಿಭಟಿಸಬೇಕು ಎಂದು ಕರೆ ನೀಡಿದರು.
ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಯಾವುದೆ ಭ್ರಷ್ಟಾಚಾರವಾಗಿಲ್ಲ. ಹಿಂದುಳಿದ ವರ್ಗದ ದೇಗುಲ ಎಂಬ ಕಾರಣಕ್ಕೆ ಸಮಿತಿ ರಚನೆ ಮಾಡಿ ಸರ್ಕಾರ ಏನೋ ಕಂಟಕ ತರಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ರಾಮಪ್ಪ ಅವರು, ಸಮಿತಿಯನ್ನು ಹಿಂಪಡೆಯಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ಎಚ್ಚರಿಕೆ ನೀಡುತ್ತೇನೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]