ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020
ಶೇಷಗಿರಿ ಭಟ್ ಹಠಾವೊ, ಸಿಗಂದೂರು ಬಚಾವೋ ಘೋಷಣೆಯೊಂದಿಗೆ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ವತಿಯಿಂದ ಸಿಗಂದೂರು ಚಲೋ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸೈದಪ್ಪ ಗುತ್ತೇದಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೈದಾಪುರ ಗುತ್ತೇದಾರ್ ಅವರು, ಶೇಷಗಿರಿ ಭಟ್ ಅವರ ಸಹೋದರ ದೇವಸ್ಥಾನದಲ್ಲಿ ಮಾಡಿದ ರಂಪಾಟ, ಹಲ್ಲೆ ವಿರುದ್ಧ ಜಿಲ್ಲಾಧಿಕಾರಿ ಅವರು ಕ್ರಮ ಕೈಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 29ರಂದು ಸಿಗಂದೂರು ಲಾಂಚ್‍ನಿಂದ ದೇವಸ್ಥಾನದವರೆಗೆ ಮೆರವಣಿಗೆ ನಡೆಸಾಗುತ್ತದೆ ಎಂದರು.
ಸಮಿತಿ ರಚನೆಗೆ ವಿರೋಧ
ಸಿಗಂದೂರು ದೇವಸ್ಥಾನದ ಅರ್ಚಕರ ವಿರುದ್ಧ ಜಿಲ್ಲಾಧಿಕಾರಿ ಅವರು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಹಿಂದುಳಿದ ವರ್ಗದ ದೇವಸ್ಥಾನದ ನಿರ್ವಹಣೆಗೆ ಸಮಿತಿ ರಚನೆ ಮಾಡಿದ್ದಾರೆ. ಈ ನಿರ್ಧಾರದಿಂದ ಸರ್ಕಾರ ಮತ್ತು ಜಿಲ್ಲಾಡಳಿತ ಹಿಂದಕ್ಕೆ ಬರಬೇಕು ಎಂದು ಅವರು ಒತ್ತಾಯಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422