‘ಶಿವಮೊಗ್ಗಕ್ಕೆ 1.50 ಲಕ್ಷ ಟಾರ್ಗೆಟ್‌, ಇನ್ನು ಮೂರು ದಿನದಲ್ಲಿ ಕಂಪ್ಲೀಟ್‌, ರಾಜ್ಯಕ್ಕೆ ವರದಿ ಸಲ್ಲಿಕೆʼ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕಾಂಗ್ರೆಸ್ ಕೈಗೊಂಡಿರುವ ವೋಟ್ ಚೋರ್‌ – ಗದ್ದಿ ಛೋಡ್ ಅಭಿಯಾನ ನ.8ಕ್ಕೆ ಒಂದು ವರ್ಷ ಪೂರೈಸುತ್ತಿದ್ದು, ಜಿಲ್ಲೆಗೆ ನೀಡಿದ್ದ 1.50 ಲಕ್ಷ ಸಹಿ (Signature) ಸಂಗ್ರಹವೂ ಪೂರ್ಣವಾಗಲಿದೆ. ಈ ದಾಖಲೆಯನ್ನು ನ.11ರಂದು ಕೆಪಿಸಿಸಿಗೆ ಸಲ್ಲಿಸಲಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ್ ಭಂಡಾರಿ ತಿಳಿಸಿದರು.

ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ, ಮತದಾನದಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ತಡೆಯುವ ದೃಷ್ಟಿಯಿಂದ ಅಭಿಯಾನ ಆರಂಭಿಸಲಾಗಿತ್ತು. ಈ ಮೂಲಕ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಮತಗಳ್ಳತನದ ಬಗ್ಗೆ ಅರಿವು ಮೂಡಿಸುವ ಜತೆಗೆ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯಲ್ಲಿ ಕಳೆದ ತಿಂಗಳಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಗಿದೆ ಎಂದರು.

ರಾಜ್ಯಕ್ಕೆ 1,11,11,111 ಗುರಿ

ರಾಜ್ಯ ಕಾಂಗ್ರೆಸ್‌ಗೆ 1,11,11,111 ಸಹಿ ಸಂಗ್ರಹದ ಗುರಿ ನೀಡಲಾಗಿತ್ತು. ಈಗಾಗಲೆ ಒಂದು ಕೋಟಿಗೂ ಅಧಿಕ ಸಹಿ ಸಂಗ್ರಹಿಸಲಾಗಿದೆ. ನಮ್ಮ ಜಿಲ್ಲೆಗೆ 1.50 ಲಕ್ಷ ಸಹಿ ಸಂಗ್ರಹದ ಗುರಿ ಇದ್ದು, 1.40 ಸಹಿ ಸಂಗ್ರಹಿಸಲಾಗಿದೆ. ಇನ್ನು ಮೂರು ದಿನದಲ್ಲಿ ಉಳಿದ ಗುರಿ ಸಾಧಿಸಿ, ನ.11ರಂದು ಇದನ್ನು ಕೆಪಿಸಿಸಿಗೆ ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.

-Manjunatha-Bhandari-In-shimoga.

ಜನರಲ್ಲಿ ತಿಳಿವಳಿಕೆ ಮೂಡಿಸಲು ಅಭಿಯಾನ

ಹಿಂದೆ ವಿವಿಧ ಪಕ್ಷದ ನಾಯಕರು ಇವಿಎಂ ಹ್ಯಾಕ್ ಮಾಡಿ ಮತಗಳ್ಳತನ ಮಾಡುತ್ತಿದ್ದರು. ನಂತರದ ದಿನಗಳಲ್ಲಿ ವಿವಿಧ ತನಿಖಾ ಸಂಸ್ಥೆಗಳಿಂದ ಶಾಸಕರನ್ನು ಬೆದರಿಸಿ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಯತ್ನ ಮಾಡಿದರು. ಆದರೆ ಈಗ ಮತ ಕಳ್ಳತನಕ್ಕೇ ಮುಂದಾಗಿದ್ದಾರೆ. ಇದನ್ನು ಜನ ಸಾಮಾನ್ಯರಿಗೆ ತಿಳಿಸುವುದು ಹಾಗೂ ಪ್ರಜಾಪ್ರಭುತ್ವದ ಕಗ್ಗೋಲೆ ತಡೆಯುವುದು ವೋಟ್ ಚೋರ್ – ಗದ್ದಿ ಛೋಡ್ ಅಭಿಯಾನದ ಉದ್ದೇಶವಾಗಿದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಸನ್ನಕುಮಾ‌ರ್, ಪ್ರಮುಖರಾದ ಎಸ್.ಟಿ.ಹಾಲಪ್ಪ, ದೇವಿಕುಮಾ‌ರ್, ಲಕ್ಷ್ಮೀಕಾಂತ್ ಮತ್ತಿತರರಿದ್ದರು.

ಇದನ್ನೂ ಓದಿ » ಸವಳಂಗ ರಸ್ತೆಯಲ್ಲಿ ಕೊಮ್ಮನಾಳು ವ್ಯಕ್ತಿಯ ಬಲಿ ಪಡೆದ ಅಪರಿಚಿತ ವಾಹನ, ಹೇಗಾಯ್ತು ಘಟನೆ?

Signature

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 8, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment