ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕರೋನೆ ಎರಡನೆ ಅಲೆ ನಿಯಂತ್ರಿಸುವುದು ಮತ್ತು ಲಸಿಕೆ ನೀಡುವಲ್ಲಿ ವಿಫಲವಾಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಂಡು, ಮೌನ ಪ್ರತಿಭಟನೆ ನಡೆಸಲಾಯಿತು.
ಎರಡನೆ ಅಲೆಯು ವೇಗವಾಗಿ ಹರಡುತ್ತಿದೆ. ಪರಿಸ್ಥಿತಿ ನಿರ್ವಹಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ. ಸೋಂಕಿತರ ಪ್ರಾಣ ರಕ್ಷಣೆ, ಲಸಿಕೆ, ಬೆಡ್, ಆಕ್ಸಿಜನ್, ವೆಂಟಿಲೇಟರ್ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಆದರೆ 45 ವರ್ಷ ಮೇಲ್ಪಟ್ಟ ಹಲವರಿಗೆ ಎರಡನೆ ಡೋಸ್ ಲಸಿಕೆ ಕೊಡಲು ಸಾದ್ಯವಾಗುತ್ತಿಲ್ಲ. ಇದರಿಂದ ಜನರು ಗೊಂದಲಕ್ಕೀಡಾಗಿದ್ದು, ಆತಂಕಗೊಂಡಿದ್ದಾರೆ ಎಂದು ಆಪಾದಿಸಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಪ್ರಮುಖರಾದ ಪ್ರವೀಣ್ ಕುಮಾರ್, ಹೆಚ್.ಸಿ.ಯೋಗೇಶ್, ಕೆ.ರಂಗನಾಥ್, ಬಿ.ಲೋಕೇಶ್, ಇ.ಟಿ.ನಿತಿನ್, ಎಸ್.ಎಸ್.ಕುಮರೇಶ್, ಆರ್.ಕಿರಣ್, ವೆಂಕಟೇಶ್ ಕಲ್ಲೂರು, ಗಗನ್, ಸುಹಾಸ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






