ಶಿವಮೊಗ್ಗದಲ್ಲಿ ಸರಳ ದಸರಾ, ಬನ್ನಿ ಮಂಟಪ್ಪಕ್ಕೆ ಸಚಿವ ಈಶ್ವರಪ್ಪ ಬರಲ್ಲ, ಯಾವೆಲ್ಲ ಆಚರಣೆಗಳಿರ್ತವೆ? ಏನಿರಲ್ಲ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಸೆಪ್ಟಂಬರ್ 2020

ಕರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಬಾರಿ ಶಿವಮೊಗ್ಗ ನಗರದಲ್ಲಿ ಅತ್ಯಂತ ಸರಳವಾಗಿ ಸಾಂಪ್ರದಾಯಿಕವಾಗಿ ದಸರಾ ಹಬ್ಬ ಆಚರಿಸಲಾಗುವುದು ಅಂತಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕರೋನಾ ಎಲ್ಲೆಡೆ ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು, ನಾವು ಈಗಾಗಲೇ ಹಲವಾರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದೇವೆ. ಜನರನ್ನು ಸೇರಿಸಿ ಕರೋನಾ ಹರಡಲು ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಬಾರದು. ಈ ಹಿನ್ನೆಲೆಯಲ್ಲಿ ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ತೀರ್ಮಾನಿಸಿರುವಂತೆ ಅತ್ಯಂತ ಸರಳವಾಗಿ ದಸರಾ ಆಚರಿಸಲಾಗುವುದು ಎಂದು ಹೇಳಿದರು.

ಮುಜರಾಯಿ ದೇವಾಲಯಗಳಿಗೆ ಮಾತ್ರ ಅವಕಾಶ

ಚಂದ್ರಶೇಖರ ಆಜಾದ್ ಮೈದಾನದಲ್ಲಿ ನಡೆಯುವ ಬನ್ನಿ ಕಾರ್ಯಕ್ರಮಕ್ಕೆ ಪ್ರತಿ ವರ್ಷದಂತೆ ಎಲ್ಲಾ ದೇವಾಲಯಗಳ ದೇವರನ್ನು ಈ ಬಾರಿ ಕರೆದುಕೊಂಡು ತರಲು ಅವಕಾಶವಿಲ್ಲ. ಶಿವಮೊಗ್ಗ ನಗರದ ಮುಜರಾಯಿ ಇಲಾಖೆ ದೇವಸ್ಥಾನಗಳಿಂದ ದೇವರನ್ನು ಕರೆ ತರಬಹುದಾಗಿದೆ. ಖಾಸಗಿ ದೇವಾಲಯಗಳ ದೇವರನ್ನು ಕರೆ ತರಲು ಅವಕಾಶವಿಲ್ಲ. ದೇವರನ್ನು ಕರೆ ತರುವ ಸಂದರ್ಭದಲ್ಲಿ ಮೆರವಣಿಗೆ ಮಾಡುವಂತಿಲ್ಲ. ಸಾಂಕೇತಿಕವಾಗಿ ಬನ್ನಿ ಮಂಟಪಕ್ಕೆ ಕರೆ ತಂದು ವಿಧಿ ವಿಧಾನಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

ಮನೆಯಲ್ಲಿ, ಮನೆ ಸಮೀಪದಲ್ಲೇ ಹಬ್ಬ ಆಚರಿಸಿ

ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಹಾಗೂ ಮನೆ ಸಮೀಪದ ದೇವಾಲಯಗಳಲ್ಲಿಯೇ ದಸರಾ ಆಚರಿಸಬೇಕು. ಬನ್ನಿಯನ್ನು ಶ್ರದ್ಧಾಪೂರ್ವಕ ತಮ್ಮ ದೇವರಿಗೆ ಸಮರ್ಪಿಸಬಹುದು. ತಾನು ಸಹ ಈ ಬಾರಿ ಬನ್ನಿ ಕಡಿಯುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಶಿವಮೊಗ್ಗದಲ್ಲಿ ಗರಿಷ್ಟ ಅಲಂಕಾರ

ದಸರ ಸಂದರ್ಭದಲ್ಲಿ ಶಿವಮೊಗ್ಗ ನಗರಾದ್ಯಂತ ಪ್ರತಿವರ್ಷದಂತೆ ಗರಿಷ್ಟ ಅಲಂಕಾರ ಮಾಡಬೇಕು. ಚಂದ್ರಶೇಖರ ಆಜಾದ್ ಮೈದಾನದಲ್ಲಿ ನಡೆಯುವ ಬನ್ನಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸದೇ ಸಹಕರಿಸಬೇಕು. ದಸರಾ ಆಚರಣೆಯ ಎಲ್ಲಾ ಕಾರ್ಯಕ್ರಮಗಳನ್ನು ಟಿವಿ, ಇಂಟರ್‍ನೆಟ್ ಮೂಲಕ ನೇರ ಪ್ರಸಾರ ಮಾಡಲು ವ್ಯವಸ್ಥೆ ಕಲ್ಪಿಸಲಾಗುವುದು. ಜನರು ಮನೆಯಲ್ಲಿಯೇ ಕುಳಿತು ಎಲ್ಲಾ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ ಎಂದರು.

ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಉಪಸ್ಥಿತರಿದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 16, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment