ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಸೆಪ್ಟಂಬರ್ 2020
ಕೋವಿಡ್ ಸಂದರ್ಭ ಬೇರೆ ನಗರ, ಜಿಲ್ಲೆಯಿಂದ ಶಿವಮೊಗ್ಗಕ್ಕೆ ಹಿಂತಿರುಗಿರುವ ಪ್ರತಿಭಾವಂತರು ಕೈಗಾರಿಕೆಗಳನ್ನು ಆರಂಭಿಸುವ ಹೊಸ ಸಾದ್ಯತೆಗಳನ್ನು ಕಂಡುಕೊಳ್ಳುವ ಅಗತ್ಯವಿದೆ. ಸರ್ಕಾರದ ವತಿಯಿಂದ ಅಂತಹವರಿಗೆ ಎಲ್ಲಾ ರೀತಿಯ ನೆರವು ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಮಾಚೇನಹಳ್ಳಿಯಲ್ಲಿ ನೂತನ ಕೈಗಾರಿಕಾ ನೀತಿ ಮತ್ತು ಹೂಡಿಕೆ ಅವಕಾಶಗಳ ಕುರಿತು ಅರಿವು ಕಾರ್ಯಕ್ರಮ, ಕಾರ್ಮಿಕ ಕಾನೂನು ತಿದ್ದುಪಡಿಗಳ ಕುರಿತು ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿವಕುಮಾರ್, ಶಿವಮೊಗ್ಗ ವಿಮಾನ ನಿಲ್ದಾಣ, ಹೊಸ ರೈಲು ಸಂಪರ್ಕ ಮತ್ತು ಚತುಷ್ಪಥ ಹೆದ್ದಾರಿ ನಿರ್ಮಾಣವಾಗುತ್ತಿದೆ. ಹೊಸ ಕೈಗಾರಿಕೆಗಳ ಆರಂಭಕ್ಕೆ ಇದು ಪೂರಕವಾಗಿದೆ ಎಂದರು.
ಮೂಲ ಸೌಲಭ್ಯ ಕಲ್ಪಿಸಲಾಗುತ್ತಿದೆ
ಉದ್ದಿಮೆಗಳನ್ನು ಆರಂಭಿಸಲು ರಸ್ತೆ ಸಂಪರ್ಕ, ವಿದ್ಯುತ್, ನೀರು ಪೂರೈಕೆಯಂತಹ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಕೈಗಾರಿಕಾ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ, ಪ್ರತ್ಯೇಕ ವಿದ್ಯುತ್ ಸಬ್‍ಸ್ಟೇಷನ್ ನಿರ್ಮಾಣ ಇತ್ಯಾದಿ ಬೇಡಿಕೆಗಳನ್ನು ಪರಿಹರಿಸಲಾಗುವುದು. ಕೃಷಿ ಆಧಾರಿತ ಕೈಗಾರಿಕೆಗಳು ಸೇರಿದಂತೆ ಹಲವು ಸಣ್ಣ ಕೈಗಾರಿಕೆಗಳನ್ನು ಆರಂಭಿಸಲು ಜಿಲ್ಲೆಯಲ್ಲಿ ಉತ್ತಮ ಅವಕಾಶಗಳಿವೆ ಎಂದರು.
ತೀರ್ಥಹಳ್ಳಿ ಕಡೆ ಕೈಗಾರಿಕಾ ವಸಾಹತು ಆರಂಭವಾಗಲಿ
ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ ಮಾತನಾಡಿ, ಶಿವಮೊಗ್ಗದಲ್ಲಿ ಬಂಡವಾಳ ಹೂಡಿಕೆ ಮಾಡಲು ಉತ್ತಮ ಅವಕಾಶಗಳಿವೆ. ಉತ್ತಮ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದರೆ ಹೂಡಿಕೆದಾರರು ಧೈರ್ಯದಿಂದ ಬಂಡವಾಳ ತೊಡಗಿಸಲು ಮುಂದೆ ಬರುತ್ತಾರೆ. ಅಂತಹ ಹೊಸ ಹೂಡಿಕೆದಾರರನ್ನು ಪ್ರೋತ್ಸಾಹಿಸುವ ಕಾರ್ಯ ನಡೆಯಬೇಕಿದೆ ಎಂದರು.
ತೀರ್ಥಹಳ್ಳಿ ಭಾಗದಲ್ಲಿ ಹೊಸದಾಗಿ ಕೈಗಾರಿಕಾ ವಸಾಹತು ಆರಂಭಿಸಿದರೆ ಆ ಭಾಗದಲ್ಲಿ ಕೈಗಾರಿಕೆಗಳನ್ನು ಆರಂಭಿಸಲು ಉತ್ತೇಜನ ನೀಡಬಹುದಾಗಿದೆ. ಶಿವಮೊಗ್ಗ ನಗರದಲ್ಲಿ ಹೊಸ ವಿಮಾನ ನಿಲ್ದಾಣ ಪ್ರಾರಂಭವಾಗಲಿದ್ದು, ಕೈಗಾರಿಕಾ ಜಿಲ್ಲೆಯಾಗಿ ಬೆಳೆಯುವ ಎಲ್ಲಾ ಅವಕಾಶಗಳಿವೆ ಎಂದು ಹೇಳಿದರು.
ಕರ್ನಾಟಕ ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ನಿಗಮದ ಅಧ್ಯಕ್ಷ ಜ್ಯೋತಿ ಪ್ರಕಾಶ್, ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಎಂ.ಎ.ರಮೇಶ ಹೆಗ್ಗಡೆ, ಶಿವಮೊಗ್ಗ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಮಂಡಳದ ಅಧ್ಯಕ್ಷ ಜೆ.ಆರ್.ವಾಸುದೇವ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200