SHIMOGA | ಇನ್ನೊಂದೇ ತಿಂಗಳು ಟೈಮ್, ನೆಹರು ಸ್ಟೇಡಿಯಂನಲ್ಲಿ ಆಗ್ತಿರುವ ಸ್ಮಾರ್ಟ್ ಸಿಟಿ ಯೋಜನೆ ಕೆಲಸ ಮುಗಿಸುವಂತೆ ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 27 ನವೆಂಬರ್ 2019

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ನೆಹರು ಕ್ರೀಡಾಂಗಣದ ಪ್ರಥಮ ಹಂತದ ಅಭಿವೃದ್ಧಿ ಕಾಮಗಾರಿಗಳನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿ, ಪ್ರಥಮ ಹಂತದಲ್ಲಿ 2.30ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಯಾವೆಲ್ಲ ಕಾಮಗಾರಿ ಪೂರ್ಣಗೊಳ್ಳಬೇಕು

ವಾಲಿಬಾಲ್ ಕೋರ್ಟ್ ನಿರ್ಮಾಣ, ಫೈಬರ್ ಛಾವಣಿ ಅಳವಡಿಕೆ, ಒಳಚರಂಡಿ ಅಭಿವೃದ್ಧಿ, ಇಂಟರ್ ಲಾಕ್‍ಗಳ ಅಳವಡಿಕೆ, ಮಣ್ಣಿನ ಸವಕಳಿ ತಡೆಯಲು ತಡೆಗೋಡೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಸುಮಾರು 4 ಮೀಟರ್ ಅಗಲದ ಜಾಗಿಂಗ್ ಟ್ರಾಕ್ ನಿರ್ಮಾಣ ಮತ್ತು ಫ್ಲಡ್‍ಲೈಟ್‍ಗಳ ಅಳವಡಿಕೆ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಕಾಮಗಾರಿ ಅನುಷ್ಟಾನದಲ್ಲಿ ಈಗಾಗಲೇ ವಿಳಂಬವಾಗಿದೆ ಎಂದು ಅವರು ಹೇಳಿದರು.

ಎರಡನೆ ಹಂತದ ಯೋಜನೆಗೆ ಅನುಮೋದನೆ

ಎರಡನೇ ಹಂತದಲ್ಲಿ 30ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಯೋಜನೆಗಳಿಗೆ ಈಗಾಗಲೇ ಅನುಮೋದನೆ ದೊರೆತಿದ್ದು, ಒಂದು ತಿಂಗಳ ಒಳಗಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಆದಷ್ಟು ಬೇಗನೆ ಕಾಮಗಾರಿ ಆರಂಭಿಸಬೇಕು. ಎರಡನೇ ಹಂತದಲ್ಲಿ ಪ್ರಸ್ತುತ ಇರುವ ಹಾಕಿ ಕೋರ್ಟ್, ಹ್ಯಾಂಡ್‍ಬಾಲ್ ಮತ್ತು ಬಾಸ್ಕೆಟ್‍ಬಾಲ್ ಕೋರ್ಟ್‍ಗಳನ್ನು ಅಂತಾರಾಷ್ಟ್ರೀಯ ದರ್ಜೆಗೇರಿಸಲು ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

76732175 984610015233752 2166544957672783872 n.jpg? nc cat=101& nc ohc=DWsi8xYo5 gAQn31C 0Ao7hbaVo0SpdHZ3Wx1Z9DJwc9OUcWtIYYBtR1A& nc ht=scontent.fblr11 1

ಸಮರ್ಪಕ ನಿರ್ವಹಣೆ ಕ್ರಮ

ಪ್ರಸ್ತುತ ಇರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು. ಕ್ರೀಡಾಕೂಟಗಳ ಸಂಘಟಕರಿಂದ ಭದ್ರತಾ ಠೇವಣಿಯನ್ನು ಪಡೆದುಕೊಳ್ಳಬೇಕು. ಕ್ರೀಡಾಂಗಣದ ಯಾವುದೇ ಸೌಲಭ್ಯಗಳಿಗೆ ಧಕ್ಕೆ ಉಂಟಾದರೆ ಇದರಿಂದ ಪಡೆದುಕೊಳ್ಳಬೇಕು. ಪ್ರಸ್ತುತ ಇರುವ ಸಿಂಥೆಟಿಕ್ ಟ್ರ್ಯಾಕ್ ಮೇಲೆ ವಾಕಿಂಗ್ ಮಾಡಲು ಅವಕಾಶ ನೀಡಬಾರದು. ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಉಲ್ಲಂಘಿಸುವವರಿಗೆ ದಂಡ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

70306922 984610068567080 3567346483973849088 n.jpg? nc cat=104& nc ohc=Z7GMdvLy3eYAQk3qsKv2X15M25hRLXm3YpNNsNTXnynf GKIdmYbLAxqQ& nc ht=scontent.fblr11 1

ಒಳಾಂಗಣ ಕ್ರೀಡಾಂಗಣ ಅಭಿವೃದ್ಧಿ

ನೆಹರು ಕ್ರೀಡಾಂಗಣದ ಹಿಂಬದಿಯಲ್ಲಿರುವ ಒಳಾಂಗಣ ಕ್ರೀಡಾಂಗಣ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಇಲ್ಲಿ ಸದಸ್ಯತ್ವ ಪಡೆಯುವವರಿಗೆ ಗುರುತಿನ ಚೀಟಿಯನ್ನು ನೀಡಬೇಕು. ಕ್ರೀಡಾಕೂಟ ಆಯೋಜಿಸುವವರಿಂದ ಭದ್ರತಾ ಠೇವಣಿ ಪಡೆಯಬೇಕು. ಎಲ್ಲಾ ಬಾಡಿಗೆಗಳನ್ನು ಆನ್‍ಲೈನ್ ಮೂಲಕ ಮಾತ್ರ ಪಡೆದುಕೊಳ್ಳಬೇಕು. ಈಗಾಗಲೇ ಒಳಾಂಗಣ ಕ್ರೀಡಾಂಗಣ ಮತ್ತು ಈಜುಕೊಳದ ಬಳಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ನೆಹರು ಕ್ರೀಡಾಂಗಣದ ಹೊರಭಾಗದಲ್ಲಿ ಸಹ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಅವರು ಆ ಬಳಿಕ ನಡೆದ ಜಿಲ್ಲಾ ಕ್ರೀಡಾಂಗಣದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜು, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ, ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

Deputy Commissioner Shivakumar has urged the officials to complete the first stage of Smart City Works in Shimoga Nehru Stadium in a month.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment