ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಹನುಮಂತಪುರದ ಅಡಿಕೆ ತೋಟದಲ್ಲಿ ಅಕ್ಷರ ಕಾಲೇಜು ಉಪನ್ಯಾಸಕ ಸುರೇಶ್ ಕುಮಾರ್ ಅವರ ಶವ ಸುಟ್ಟ ಸ್ಥಿತಿಯಲ್ಲಿ (Mysterious Death) ಪತ್ತೆಯಾದ ಬೆನ್ನಲ್ಲೇ, ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್.ಬಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣವನ್ನು ಪ್ರಾಥಮಿಕವಾಗಿ ಕೊಲೆ ಎಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ – ಮೀನು ಮಾರುಕಟ್ಟೆ ಬಳಿ ಕಿರಿಕ್, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?
ಶಿವಮೊಗ್ಗ ಎಸ್‌ಪಿ ಹೇಳಿದ್ದೇನು?
ಶಿವಮೊಗ್ಗದ ಅಕ್ಷರ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ಸುರೇಶ್ ಅವರು ಮದುವೆ ಸಮಾರಂಭವೊಂದಕ್ಕೆ ಹೋಗಿ ಬರುವುದಾಗಿ ಹೇಳಿ ಶನಿವಾರ ಮನೆಯಿಂದ ಹೊರಟಿದ್ದರು. ಇಂದು ಬೆಳಗ್ಗೆ ಅವರದ್ದೇ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ ಶವದ ಸುತ್ತಮುತ್ತ ಬೆಂಕಿ ಉರಿಯುತ್ತಿತ್ತು ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದರು.

ಬೈಕ್, ಬ್ಯಾಗ್ ಪತ್ತೆ
ಇನ್ನು, ಘಟನಾ ಸ್ಥಳದಲ್ಲಿ ಮೃತ ಸುರೇಶ್ ಅವರ ದ್ವಿಚಕ್ರ ವಾಹನ ಮತ್ತು ಬ್ಯಾಗ್ ಪತ್ತೆಯಾಗಿವೆ. ಶವವು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಮೇಲ್ನೋಟಕ್ಕೆ ಇದು ಕೊಲೆ ಎಂಬ ಸಂಶಯವಿದೆ. ಆದ್ದರಿಂದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದರು.

ಸುರೇಶ್ ಅವರ ಮೊಬೈಲ್ ಫೋನ್ ಸ್ಥಳದಲ್ಲಿ ಸಿಕ್ಕಿದೆ. ಅದನ್ನು ಹೆಚ್ಚಿನ ತನಿಖೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ನಿಖಿಲ್ ಅವರು ತಿಳಿಸಿದರು.
ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ತಂಡ
ಇನ್ನು, ಸುರೇಶ್ ಅವರ ಕುಟುಂಬದವರು ಯಾರ ಮೇಲೆಯೂ ಆರೋಪ ಮಾಡಿಲ್ಲ. ಆದರೂ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸೋಕೋ ತಂಡ ಭೇಟಿ ನೀಡಿ ಪರಿಶೀಲಿಸುತ್ತಿದೆ ಎಂದರು. ಪ್ರಕರಣದ ತನಿಖೆಗೆ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಈ ತಂಡ ಈಗಾಗಲೇ ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆ ಆರಂಭಿಸಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ತಿಳಿಸಿದರು.

LATEST NEWS
- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

- ಮೀನು ಮಾರುಕಟ್ಟೆ ಬಳಿ ಕಿರಿಕ್, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

- ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

About The Editor
ನಿತಿನ್ ಆರ್.ಕೈದೊಟ್ಲು













