ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 JANUARY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಆಯನೂರು ಮಂಜುನಾಥ್ ಅವರಿಗೆ ಬಿಜೆಪಿ ಹೊರತು ಬೇರಾವ ಪಕ್ಷದಲ್ಲಿಯು ಗುರುಬಲವಿಲ್ಲ. ಆದ್ದರಿಂದ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ತಮಗೆ ಟಿಕೆಟ್ ಸಿಗಲಿದೆ ಎಂದು ಆಕಾಂಕ್ಷಿ ಎಸ್.ಪಿ.ದಿನೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 32 ವರ್ಷದಿಂದ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇನೆ. ಕಳೆದ ಎರಡು ಚುನಾವಣೆಯಲ್ಲಿ ಬಿಜೆಪಿಗೆ ಪ್ರಬಲ ಪೈಪೋಟಿ ಒಡ್ಡಿದ್ದೇನೆ ಎಂದು ತಿಳಿಸಿದರು.
ಏನೇನೆಲ್ಲ ಹೇಳಿದರು? ಇಲ್ಲಿದೆ 5 ಪಾಯಿಂಟ್
32 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಎನ್ಎಸ್ಯುಐ, ಯುವ ಕಾಂಗ್ರೆಸ್ ಸೇರಿದಂತೆ ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಡಿ.ಹೆಚ್.ಶಂಕರಮೂರ್ತಿ ಮತ್ತು ಆಯನೂರು ಮಂಜುನಾಥ್ ಅವರಿಗೆ ಪ್ರಬಲ ಪೈಪೋಟಿ ಒಡ್ಡಿದ್ದೇನೆ. 2008ರ ಚುನಾವಣೆಗಿಂತಲು 2012ರ ಚುನಾವಣೆಯಲ್ಲಿ ಆರು ಸಾವಿರ ಹೆಚ್ಚುವರಿ ಮತ ಪಡೆದಿದ್ದೇನೆ.
ನೈಋತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಚುನಾವಣೆ ಹೊತ್ತಿಗೆ 30 ವಿಧಾನಸಭೆ ಕ್ಷೇತ್ರಗಳ ಪೈಕಿ 27ರಲ್ಲಿ ಬಿಜೆಪಿ ಶಾಸಕರಿದ್ದರು. ಆಗಲು ಪ್ರಬಲ ಪೈಪೋಟಿ ನೀಡಿದ್ದೇನೆ. ಈ ಬಾರಿ 15 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಪಕ್ಷದ ಮಾಜಿ ಶಾಸಕರು, ಪಕ್ಷದ ಜಿಲ್ಲಾಧ್ಯಕ್ಷರು, ಮುಖಂಡರು, ಕಾರ್ಯಕರ್ತರು ತಮಗೆ ಬೆಂಬಲವಾಗಿದ್ದಾರೆ.
ಆಯನೂರು ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಹೊತ್ತಿಗೆ ಅವರ ಆಪ್ತರೊಬ್ಬರು ತಮ್ಮನ್ನು ಭೇಟಿಯಾಗಿದ್ದರು. ಅವರು ಟಿಕೆಟ್ ಕೇಳುವುದಿಲ್ಲ. ಆದ್ದರಿಂದ ಅವರ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಬೇಡಿ ಎಂದು ಮನವಿ ಮಾಡಿದ್ದರು. ಮೂರ್ನಾಲ್ಕು ಬಾರಿ ಅವರು ತಮ್ಮನ್ನು ಭೇಟಿಯಾಗಿದ್ದರು. ಕಾಂಗ್ರೆಸ್ ಸೇರ್ಪಡೆಯಾದ ನಾಲ್ಕೇ ದಿನಕ್ಕೆ ಆಯನೂರು ಮಂಜುನಾಥ್ ಅವರು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದರು. ಆಗ ತಮ್ಮ ಬಳಿ ಬಂದವರನ್ನು ವಿಚಾರಿಸಿದಾಗ ರಾಜಕೀಯದಲ್ಲಿ ಇದೆಲ್ಲ ಸಹಜ ಎಂದಿದ್ದರು.
ನೈಋತ್ಯ ಪದವೀಧರ ಕ್ಷೇತ್ರದಿಂದ ಸದ್ಯ ಆಯನೂರು ಮಂಜುನಾಥ್ ಮತ್ತು ತಮ್ಮ ಹೆಸರು ಅಂತಿಮಗೊಂಡಿದೆ. ಆದರೆ ಆಯನೂರು ಮಂಜುನಾಥ್ ಅವರಿಗೆ ಬಿಜೆಪಿ ಹೊರತು ಬೇರೆಲ್ಲೂ ಗುರುಬಲವಿಲ್ಲ. ಅವರು ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರಾಗಿದ್ದೆಲ್ಲ ಬಿಜೆಪಿಯಿಂದಲೆ. ಅವರು ಬೇರೆ ಪಕ್ಷದಿಂದ ಎಂದಿಗೂ ಆಯ್ಕೆಯಾಗಿಲ್ಲ. ಆದ್ದರಿಂದ ಅವರಿಗೆ ಬೇರೆ ಪಕ್ಷದಲ್ಲಿ ಗುರುಬಲವಿಲ್ಲ.
ಇದನ್ನೂ ಓದಿ – ನಿಗಮ, ಮಂಡಳಿ ನೇಮಕಾತಿ, ಶಿವಮೊಗ್ಗದಲ್ಲಿ ಪಟ್ಟಿ ರಿಲೀಸ್ಗು ಮೊದಲೇ ಐವರಿಗೆ ಅಭಿನಂದನೆ
ಪ್ರತಿ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚು ಮತದಾರರು ಇರುತ್ತಿದ್ದರು. ಆದರೆ ಈ ಬಾರಿ ಮಂಗಳೂರು ಮತ್ತು ಉಡುಪಿಯಲ್ಲಿ ಹೆಚ್ಚಿನ ಜನ ಹೆಸರು ನೋಂದಾಯಿಸಿದ್ದಾರೆ. ಇಡೀ ಕ್ಷೇತ್ರದಾದ್ಯಂತ ಪ್ರವಾಸ ಮಾಡಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುವಂತೆ ಮಾನವಿ ಮಾಡುತ್ತಿದ್ದೇನೆ. ಇದಕ್ಕಾಗಿ ಅಭಿಯಾನ ಕೈಗೊಂಡಿದ್ದೇನೆ.