ಅನುಮಾನಾಸ್ಪದ ಬಾಕ್ಸ್‌ ಕೇಸ್‌, ಒಳಗಿದ್ದ ವಸ್ತುಗಳ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

SHIVAMOGGA LIVE NEWS | 6 NOVEMBER 2023

SHIMOGA : ರೈಲ್ವೆ ನಿಲ್ದಾಣದ ಸಮೀಪ ಪತ್ತೆಯಾದ ಅನುಮಾನಾಸ್ಪದ ಬಾಕ್ಸ್‌ಗಳನ್ನು ತೆರೆದು ಬಾಂಬ್‌ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿತು. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರು ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಅನುಮಾನಾಸ್ಪದ ಬಾಕ್ಸ್‌ಗಳ ಕುರಿತು ತಜ್ಞರ ತಂಡ ಪರಿಶೀಲಿಸಿದೆ. ಅವುಗಳನ್ನು ತೆರೆದಿದ್ದು ಕೆಲವು ರದ್ದಿ ವಸ್ತುಗಳು ಪತ್ತೆಯಾಗಿವೆ. ಬಾಕ್ಸ್‌ಗಳಲ್ಲಿ ಯಾವುದೆ ಸ್ಪೋಟಕ ವಸ್ತು ಇರಲಿಲ್ಲ. ಅವುಗಳನ್ನು ಸ್ಥಳದಿಂದ ರವಾನಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಅದು ಉಪ್ಪು ಎಂದು ತಿಳಿದು ಬಂದಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮೇಡ್ ಇನ್ ಬಾಂಗ್ಲಾದೇಶ ಬಾಕ್ಸ್, ರೈಲ್ವೆ ನಿಲ್ದಾಣದ ಬಳಿ ಆತಂಕ

-IPS-Mithun-Kumar-about-suspicious-box-found-in-Shimoga.webp

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment