ಶಿವಮೊಗ್ಗ: ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ (Pakistan) ಘೋಷಣೆ ಕುಗಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಎಸ್.ಪಿ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್
ಇಂದು ಬೆಳಗ್ಗೆ 8.30ರ ಹೊತ್ತಿಗೆ 12 ಸಕೆಂಡ್‌ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದು ನಮ್ಮ ಗಮನಕ್ಕೆ ಬಂದಿದೆ. ಭದ್ರಾವತಿಯಲ್ಲಿ ನಿನ್ನೆ ನಡೆದ ಮೆರವಣಿಗೆ ಸಂದರ್ಭದ್ದು ಮತ್ತು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ ಎಂದು ಹೇಳಲಾಗುತ್ತಿದೆ ಎಂದು ಎಸ್.ಪಿ ತಿಳಿಸಿದರು.
ಈ ವಿಡಿಯೋ ಸಂಬಂಧ ಭದ್ರಾವತಿ ಹಳೆ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ಎಫ್‌ಐಅರ್ ದಾಖಲಿಸಿಕೊಂಡಿದ್ದೇವೆ. ವಿಡಿಯೋದಲ್ಲಿ ಯಾರೆಲ್ಲ ಇದ್ದಾರೆ ಎಂದು ಗುರುತಿಸಲಾಗುತ್ತಿದೆ. ವಿಡಿಯೋ ಚಿತ್ರೀಕರಿಸಿದ್ದು ಯಾರು? ಸ್ಥಳ ಯಾವುದು? ಎಂದು ಪತ್ತೆ ಮಾಡಲು ಮೂವರು ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ಮೂರು ತಂಡ ರಚಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಹೇಳಿದರು.

ವಿಡಿಯೋವನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಇನ್ನೊಂದೆಡೆ ವಿಡಿಯೋದಲ್ಲಿ ಇರುವವರನ್ನು ವಶಕ್ಕೆ ಪಡೆಯಲಿದ್ದೇವೆ. ಆ ಬಳಿಕ ಮುಂದಿನ ಅಪ್‌ಡೇಟ್ ನೀಡಲಿದ್ದೇವೆ ಎಂದರು.
ಮೆರವಣಿಗೆ ಸಂಪೂರ್ಣ ಭಾಗವನ್ನು ಪೊಲೀಸ್ ಕ್ಯಾಮರಾಗಳು, ವಿಡಿಯೋ ಜೊತೆಗೆ ಧ್ವನಿ ಮುದ್ರಣವಾಗುವ ಸಿಸಿ ಕ್ಯಾಮರಾ, ಡ್ರೋಣ್‌ನಲ್ಲಿ ಸೆರೆ ಹಿಡಿದಿದ್ದೇವೆ. ಅವುಗಳನ್ನು ಪರಿಶೀಲಿಸುತ್ತೇವೆ. ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು.

ಇದನ್ನೂ ಓದಿ » ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಆರೋಪ, ವಿಡಿಯೋ ವೈರಲ್
SP Mithun Kumar reaction about pro Pakistan slogans
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





