ಶಿವಮೊಗ್ಗಕ್ಕೆ ನಾಳೆ ವಿಶೇಷ ವಿಮಾನ, ಹೆಲಿಕಾಪ್ಟರ್‌ನಲ್ಲಿ ನಾಯಕರ ಭೇಟಿ, 45 ನಿಮಿಷ ಮಹತ್ವದ ಮೀಟಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 APRIL 2023

SHIMOGA : ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಏ.27ರಂದು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ರಾಹುಲ್‌ ಗಾಂಧಿ ಅವರು ವಿಶೇಷ ವಿಮಾನದ (Special Flight) ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಹೆಲಿಕಾಪ್ಟರ್‌ ಮೂಲಕ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್‌ ತಿಳಿಸಿದರು.

Shimoga-Airport-General-Image

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌.ಎಸ್.ಸುಂದರೇಶ್‌, ರಾಹುಲ್‌ ಗಾಂಧಿ ಅವರು ದೆಹಲಿಯಿಂದ ವಿಶೇಷ ವಿಮಾನದ (Special Flight) ಮೂಲಕ ನೇರವಾಗಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಿಯಾಂಕ ಗಾಂಧಿಯವರು ಹೆಲಿಕಾಪ್ಟರ್ ಮೂಲಕ ವಿಮಾನ ನಿಲ್ದಾಣ ಸೇರಲಿದ್ದಾರೆ. ಮಧ್ಯಾಹ್ನ 12.40ರ ಹೊತ್ತಿಗೆ ಶಿವಮೊಗ್ಗಕ್ಕೆ ಆಗಮಿಸಬಹುದು ಎಂದರು.

ಅಭ್ಯರ್ಥಿಗಳು, ಮುಖಂಡರ ಜೊತೆ ಸಭೆ

ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಸುಮಾರು 45 ನಿಮಿಷ ಶಿವಮೊಗ್ಗದಲ್ಲಿ ಇರಲಿದ್ದಾರೆ. ಈ ವೇಳೆ ಜಿಲ್ಲೆಯ ಅಭ್ಯರ್ಥಿಗಳು, ಮುಖಂಡರನ್ನು ಅವರು ಭೇಟಿಯಾಗಲಿದ್ದಾರೆ. ಚುನಾವಣೆ ಸಿದ್ಧತೆ, ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲಿದ್ದಾರೆ. ಅವರು ಸಭೆ ನಡೆಸುವ ಸ್ಥಳದ ಕುರಿತು ಚುನಾವಣಾಧಿಕಾರಿಗಳಿಗೆ ಅನುಮತಿ ಕೇಳಲಾಗಿದೆ. ಅನುಮತಿ ಸಿಕ್ಕ ಬಳಿಕವಷ್ಟೇ ಸ್ಥಳ ನಿಗದಿಯಾಗಲಿದೆ. ಈ ವೇಳೆ ಕಾರ್ಯಕರ್ತರ ಭೇಟಿಗೆ ಅವಕಾಶವಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಏ.28ಕ್ಕೆ ಬರಲಿದೆ ವಿಶೇಷ ವಿಮಾನ, ಬರ್ತಿರೋದ್ಯಾರು?

ಸಭೆ ಬಳಿಕ ರಾಹುಲ್‌ ಗಾಂಧಿ ಮತ್ತು ಪ್ರಯಾಂಕಾ ಗಾಂಧಿ ಅವರು ಉಡುಪಿ ಜಿಲ್ಲೆಯ ಕಾಪುಗೆ ತೆರಳಲಿದ್ದಾರೆ ಎಂದು ಸುಂದರೇಶ್‌ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಹೆಚ್.ಎಂ.ಚಂದ್ರಶೇಖರ್, ಚಂದ್ರಭೂಪಾಲ್, ಹೆಚ್.ಪಿ ಗಿರೀಶ್, ಎಸ್.ಪಿ. ಶೇಷಾದ್ರಿ, ಸುರೇಶ್ ಶೆಟ್ಟಿ, ಚಂದನ್ ಸೇರಿದಂತೆ ಹಲವರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 26, 2023

Leave a Comment