ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2020
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕರೋನದಿಂದ ಬೇಗ ಗುಣವಾಗಲಿ ಅಂತಾ ಶಿವಮೊಗ್ಗ ಕಾಂಗ್ರೆಸ್ ಮುಖಂಡರು ಇವತ್ತು ಪೂಜೆ ಸಲ್ಲಿಸಿದರು. ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಪೂಜೆ ವಿಶೇಷ ಪೂಜೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾ ಕಾಂಗ್ರೆಸ್
ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೆಳಗ್ಗೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪೂಜೆ ನೆರವೇರಿಸಲಾಯಿತು. ಈ ವೇಳೆ ಮಾತನಾಡಿದ ಹೆಚ್.ಎಸ್.ಸುಂದರೇಶ್, ಡಿ.ಕೆ.ಶಿವಕುಮಾರ್ ಅವರು ಕರೋನ ಸಂಕಷ್ಟ ಕಾಲದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು, ಜನರಲ್ಲಿ ಆತ್ಮಸ್ಥೈರ್ಯ ತುಂಬುತ್ತಿದ್ದರು. ಈಗ ಅವರು ಕರೋನದಿಂದ ಆಸ್ಪತ್ರೆ ಸೇರಿದ್ದಾರೆ. ಅವರು ಬಹಳ ಬೇಗ ಗುಣವಾಗಬೇಕಿದೆ ಅಂತಾ ಪೂಜೆ ಸಲ್ಲಿಸಿದ್ದೇವೆ ಎಂದರು.
ಕಾರ್ಪೊರೇಟರ್ ರೇಖಾ ರಂಗನಾಥ್, ಯಮುನಾ ರಂಗೇಗೌಡ, ಪ್ರಮುಖರಾದ ರಂಗನಾಥ್, ಶರತ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕಾಂಗ್ರೆಸ್
ಮತ್ತೊಂದೆಡೆ ಕಾಂಗ್ರೆಸ್ ವಿದ್ಯಾರ್ಥಿ ಘಟಕ ಎನ್ಎಸ್ಯುಐ ವತಿಯಿಂದಲೂ ಡಿ.ಕೆ.ಶಿವಕುಮಾರ್ ಗುಣವಾಗಲಿ ಅಂತಾ ಪೂಜೆ ಸಲ್ಲಿಸಲಾಯಿತು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.
https://www.facebook.com/liveshivamogga/videos/1161878454240695/?t=0
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]