ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 SEPTEMBER 2023
ಜೆಡಿಎಸ್ ಕಾರ್ಯಕರ್ತರಿಂದ ವಿಶೇಷ ಪೂಜೆ
SHIMOGA : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸಿ ಜೆಡಿಎಸ್ ಕಾರ್ಯಕರ್ತರು ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಸದ್ಯದಲ್ಲೇ ಅವರು ಡಿಸ್ಚಾರ್ಜ್ ಆಗಲಿದ್ದಾರೆʼ ಎಂದರು. ಜೆಡಿಎಸ್ ಪಕ್ಷದ ನಾಯಕ ನರಸಿಂಹ ಗಂಧದ ಮನೆ ಮಾತನಾಡಿ, ‘ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಿಸಲಿ ಎಂದು ವಿಶೇಷ ಪೂಜೆ ನೆರವೇರಿಸಿದ್ದೇವೆ’ ಎಂದರು. ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರು ಪೂಜೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಪ್ರಶಸ್ತಿ
SHIMOGA : ಸ್ಮಾರ್ಟ್ ಸಿಟಿ ಯೋಜನೆ ಅಡಿ ಕನ್ಸರ್‌ವೆನ್ಸಿಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಿದ ಶಿವಮೊಗ್ಗಕ್ಕೆ ಕೇಂದ್ರದ ವಸತಿ ಮತ್ತು ನಗರ ವ್ಯವಹಾರ ಸಚಿವಾಲಯ ಪ್ರಶಸ್ತಿ ಘೋಷಿಸಿದೆ. ನಗರದ ಕನ್ಸರ್‌ವೆನ್ಸಿಗಳನ್ನು ಅಭಿವೃದ್ಧಿಪಡಿಸಿ ಫುಡ್ ಕೋರ್ಟ್ ಸೇರಿದಂತೆ ವಿವಿಧ ಸಾರ್ವಜನಿಕ ಉಪಯೋಗಿ ಕೆಲಸಕ್ಕೆ ಮೀಸಲಿಟ್ಟಿದೆ. ಈ ಹಿನ್ನೆಲೆ ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಪ್ರಶಸ್ತಿ ಘೋಷಿಸಿದೆ. ಹುಬ್ಬಳ್ಳಿ – ಧಾರವಾಡ, ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಗಳಿಗು ಪ್ರಶಸ್ತಿ ಲಭಿಸಿದೆ.
ಇದನ್ನೂ ಓದಿ- ಶಿವಮೊಗ್ಗದ ವಿವಿಧೆಡೆ ಮಳೆ, ಬಿಸಿಲ ಧಗೆಯಿಂದ ಹೈರಾಣಾಗಿದ್ದ ನಗರಕ್ಕೆ ತುಸು ನೆಮ್ಮದಿ ನೀಡಿದ ವರುಣ
ಸ್ವಯಂ ಸೇವಕರಾಗಲು ಮನವಿ
SHIMOGA : ಗಣೇಶ ಚತುರ್ಥಿ ಸಂದರ್ಭ ಪೊಲೀಸ್ ಇಲಾಖೆ ಸಿಬ್ಬಂದಿಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವವರು ಹೆಸರ ನೋಂದಾಯಿಸಲು ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ. ಸಾರ್ವಜನಿಕರು, ಸಂಘ – ಸಂಸ್ಥೆಗಳು ಹತ್ತಿರದ ಪೊಲೀಸ್ ಠಾಣೆಗಳಲ್ಲಿ ತಮ್ಮ ಹೆಸರು ಮತ್ತು ವಿಳಾಸವನ್ನು ನೋಂದಾಯಿಸಬಹುದಾಗಿದೆ. ಸೆ.5ರ ಒಳಗೆ ಹೆಸರು ನೋಂದಣಿ ಮಾಡಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422